ಬೆಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕಿಂತ ಹೆಚ್ಚಿನ ಜನರ ಜಮಾವಣೆಗೆ ಪೊಲೀಸ್ ಇಲಾಖೆ ಪೂರ್ವಾನುಮತಿ ಕಡ್ಡಾಯ. ಇಲ್ಲದಿದ್ದರೆ ಅದನ್ನು ಕಾನೂನು ಬಾಹಿರ ಅಕ್ರಮ ಕೂಟ ಎಂದು ಪರಿಗಣಿಸಲಾಗುತ್ತದೆ‘ ಎಂಬ ರಾಜ್ಯ ಸರ್ಕಾರದ ಸಂಪುಟ ನಿರ್ಧಾರ ಜಾರಿಗೆ ಹೈಕೋರ್ಟ್ ತಡೆ ನೀಡಿದೆ.

ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹುಬ್ಬಳ್ಳಿಯ 'ಪುನಃಶ್ಚೇತನ ಸೇವಾ ಸಂಸ್ಥೆ' ಅಧ್ಯಕ್ಷ ವಿನಾಯಕ ಮತ್ತು 'ವಿ ಕೇರ್ ಫೌಂಡೇಶನ್' ಅಧ್ಯಕ್ಷ ಗಂಗಾಧರಯ್ಯ, ಧಾರವಾಡದ ರಾಜೀವ ಮಲ್ಹಾರ ಕುಲಕರ್ಣಿ ಹಾಗೂ ಬೆಳಗಾವಿಯ ಉಮಾ ಸತ್ಯಜಿತ್ ಚವಾಣ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಮಂಗಳವಾರ ಬೆಳಿಗ್ಗೆ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರ ವಾದ ಆಲಿಸಿದ ನ್ಯಾಯಪೀಠ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿ ಆದೇಶಿಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಕಾರ್ಯದರ್ಶಿ, ಡಿಜಿ-ಐಜಿಪಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಶನರ್ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಕೋರಿಕೆ ಏನು?: 'ಸರ್ಕಾರಿ ಸ್ಥಳಗಳಲ್ಲಿ ಅನುಮತಿಯಿಲ್ಲದ ಮೆರವಣಿಗೆ, ಸಭೆ ನಡೆಸುವುದನ್ನು ನಿರ್ಬಂಧಿಸಿ ಸರ್ಕಾರ ಇದೇ 18 ರಂದು ಹೊರಡಿಸಿರುವ ಆದೇಶ ಸಂವಿಧಾನದ 13,14 ಮತ್ತು 19ನೇ ವಿಧಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ, ಈ ಆದೇಶವನ್ನು ರದ್ದುಗೊಳಿಸಬೇಕು' ಎಂದು ಅರ್ಜಿದಾರರು ಕೋರಿದ್ದಾರೆ.

ಸರ್ಕಾರದ ಆದೇಶದಲ್ಲಿ ಏನಿದೆ?: 'ನೋಂದಣಿಯಾದ ಅಥವಾ ನೋಂದಣಿ ಆಗದ ಯಾವುದೇ ಖಾಸಗಿ ಸಂಸ್ಥೆ ಅಥವಾ ಜನರು ಸರ್ಕಾರದ ಆಸ್ತಿಯನ್ನು ಅಂದರೆ, ಜಮೀನು, ರಸ್ತೆ, ಪಾರ್ಕ್, ಆಟದ ಮೈದಾನಗಳು ಅಥವಾ ಕಟ್ಟಡಗಳಲ್ಲಿ ಸೇರಬೇಕಾದರೆ ಇಲ್ಲವೆ ಜಮಾವಣೆಗೊಳ್ಳಬೇಕು ಎಂದು ನಿರ್ಧರಿಸಿದರೆ, ಸ್ಥಳೀಯ ಪೊಲೀಸ್ ಕಮಿಶನರ್ ಅಥವಾ ಡೆಪ್ಯುಟಿ ಕಮಿಶನರ್ ಅವರಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಇಲ್ಲವಾದಲ್ಲಿ ಇದು ಭಾರತೀಯ ನ್ಯಾಯ ಸಂಹಿತೆ-2023ರ ಪ್ರಕಾರ ಕಾನೂನು ಬಾಹಿರ ಅಕ್ರಮ ಕೂಟ ಎಂದು ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಮಲಾಗುತ್ತದೆ' ಎಂದು ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ ಹೊರಡಿಸಿರುವ ಈ ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.