ಬೆಂಗಳೂರು: ರಾಜ್ಯದ ವಿವಿಧೆಡೆ ಮುಂದಿನ 7 ದಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಜತೆಗೆ, ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 21ರಿಂದ 27ರವರೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ ಮತ್ತು ಕೊಪ್ಪಳ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

ಬಿಸಿಲಿನಿಂದ ತೇವಾಂಶ ಹೆಚ್ಚಾಗುವುದರಿಂದ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಕೂಡ ನೀಡಿದೆ.

ಜೊತೆಗೆ ಬಿಸಿಗಾಳಿ ಅಥವಾ ವಿಪರೀತ ತಾಪಮಾನದಿಂದ ನಿಮ್ಮನ್ನು ರಕ್ಷಿಸಲು ಸಾರ್ವಜನಿಕ ಜಾಗೃತಿ ವಿಡಿಯೊಗಳನ್ನು ಹವಾಮಾನ ಇಲಾಖೆ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.