ಬೆಂಗಳೂರು: ‘ಪೊಲೀಸ್ ಠಾಣೆಯಲ್ಲಿ ದೂರನ್ನು ತಿರಸ್ಕರಿಸಿದರೆ ದೂರುದಾರರು ನೇರವಾಗಿ ಹೈಕೋರ್ಟ್ ಮೊರೆಹೋಗಬಹುದು’ ಎಂದು ಪ್ರಕರಣವೊಂದರಲ್ಲಿ ಹೈಕೋರ್ಟ್ ಆದೇಶಿಸಿದೆ.

‘ನಮ್ಮ ದೂರನ್ನು ಪರಿಗಣಿಸಲು ಹುಳಿಮಾವು ಪೊಲೀಸ್ ಠಾಣೆ ಅಧಿಕಾರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಬಿ.ಎಚ್.ನಾಗರಾಜು ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ–2023ರ (ಬಿಎನ್ಎಸ್ಎಸ್) ಕಲಂ 173(4)ರ ಅಡಿಯಲ್ಲಿ ಸೂಚಿಸಲಾದ ಉನ್ನತ ಅಧಿಕಾರಿ ಮತ್ತು ಮ್ಯಾಜಿಸ್ಟ್ರೇಟ್ ಅವರನ್ನು ಸಂಪರ್ಕಿಸುವ ವಿಧಾನವು ಮಾಹಿತಿಯನ್ನು ದಾಖಲಿಸಲು ನಿರಾಕರಿಸುವ ಪ್ರಕರಣಗಳಿಗೆ ಮಾತ್ರವೇ ಅನ್ವಯಿಸುತ್ತದೆ. ಹೊರತಾಗಿ ತರ್ಕಬದ್ಧ ಅನುಮೋದನೆಯ ಮೂಲಕ ದೂರನ್ನು ತಿರಸ್ಕರಿಸುವ ಪ್ರಕರಣಗಳಿಗೆ ವಿಸ್ತರಿಸುವುದಿಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಚ್.ಪವನಚಂದ್ರ ಶೆಟ್ಟಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.