ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬ್ರೈಲ್ ಕಿಟ್ ವಿತರಿಸುವ ಯೋಜನೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲು ಹೈಕೋರ್ಟ್ ನಿರಾಕರಿಸಿದೆ.

‘ಲ್ಯಾಪ್ ಟಾಪ್ ಹಾಗೂ ಬ್ರೈಲ್ ಕಿಟ್ ವಿತರಣೆ ಯೋಜನೆ-2025ರಡಿ ಆನ್ ಲೈನ್ಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು 60 ದಿನಗಳವರೆಗೆ ವಿಸ್ತರಿಸಬೇಕು ಅದಕ್ಕಾಗಿ ಸೇವಾ ಸಿಂಧು ಪೋರ್ಟಲ್ ತೆರೆದಿಡುವಂತೆ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ ವಕೀಲರು ಮತ್ತು ಸ್ವತಃ ಅಂಧರೂ ಆದ ಎನ್.ಶ್ರೇಯಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಈಗಾಗಲೇ ಎರಡು ಬಾರಿ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹಾಗಾಗಿ ಪುನಃ ದಿನಾಂಕ ವಿಸ್ತರಿಸಬೇಕೆಂಬ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ. ಆದರೆ, ಯಾವುದೇ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದ ವಿದ್ಯಾರ್ಥಿಗಳು ವೈಯುಕ್ತಿಕವಾಗಿ ನ್ಯಾಯಾಲಯದ ಮೆಟ್ಟಿಲೇರಿದರೆ ಅದಕ್ಕೆ ಕಾರಣಗಳನ್ನು ಪರಿಶೀಲಿಸಬಹುದು’ ಎಂದು ಹೇಳಿ ಅರ್ಜಿಯನ್ನು ವಿಲೇವಾರಿ ಮಾಡಿತು.

ಸಮೀರ್ ಅರ್ಜಿ: ರಿಜಿಸ್ಟ್ರಿಗೆ ಸೂಚನೆ

'ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿಯಾಗಿ ತಮ್ಮ ಯೂ–ಟ್ಯೂಬ್ ಚಾನಲ್ನಲ್ಲಿ ವಿಡಿಯೊ ಸಹಿತದ ಸುದ್ದಿ ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿರುವ ಎಂ.ಡಿ.ಸಮೀರ್ ಅರ್ಜಿಯ ವಿಚಾರಣೆ ಬೆಂಗಳೂರು ಪ್ರಧಾನ ಪೀಠದಲ್ಲಿ ನಡೆಯಬೇಕೊ ಅಥವಾ ಧಾರವಾಡದ ಪೀಠದಲ್ಲಿ ನಡೆಯಬೇಕೊ ಎಂಬುದನ್ನು ವಿಶದಪಡಿಸಿ’ ಎಂದು ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿದೆ.

‘ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಿವಿಲ್ ಜಡ್ಜ್ (ಕಿರಿಯ ವಿಭಾಗ) ಮತ್ತು ಜೆಎಂಎಫ್ಸಿ ಕೋರ್ಟ್ನಲ್ಲಿರುವ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿದ ರಿಟ್ ಅರ್ಜಿ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು.

ಈ ಹಿಂದಿನ ವಿಚಾರಣೆ ವೇಳೆಯಲ್ಲಿಯೇ ಪ್ರಾಸಿಕ್ಯೂಷನ್ ಪರ ವಕೀಲರು ಈ ಅರ್ಜಿ ಬಳ್ಳಾರಿ ಪೀಠದ ವ್ಯಾಪ್ತಿಗೆ ಒಳಪಡುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು. ಆದರೆ, ಈ ಕುರಿತ ಜಿಜ್ಞಾಸೆ ಬಗೆಹರಿದಿರಲಿಲ್ಲ. ಕಾರಣ ನ್ಯಾಯಪೀಠ, ಇದನ್ನು ಸ್ಪಷ್ಟಪಡಿಸುವಂತೆ ರಿಜಿಸ್ಟ್ರಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿತು.

ಕೆಎಸ್ಎಲ್ಯು ಶುಲ್ಕ ಹೆಚ್ಚಳ ರದ್ದು

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ (ಕೆಎಸ್ಎಲ್ಯು) 5 ಮತ್ತು 3 ವರ್ಷಗಳ ಕೋರ್ಸ್ಗಳಿಗೆ ಪ್ರವೇಶಾತಿ ಶುಲ್ಕ ಹೆಚ್ಚಳ ಮಾಡಿ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಬೆಂಗಳೂರಿನ ಕೆ.ಎನ್.ಪ್ರಣವ ಹಾಗೂ ಎನ್. ಪ್ರಿಯಾಂಕ ಸೇರಿದಂತೆ 6 ಮಂದಿ ಕಾನೂನು ವಿದ್ಯಾರ್ಥಿಗಳು ಸಲ್ಲಿಸಿದ್ದ ಮೂರು ಪ್ರತ್ಯೇಕ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿ ಈ ಕುರಿತಂತೆ ಆದೇಶಿಸಿದೆ.

‘ಸುತ್ತೋಲೆ ಆಧರಿಸಿ ಸಂಗ್ರಹಿಸಲಾಗಿರುವ ಹೆಚ್ಚುವರಿ ಶುಲ್ಕವನ್ನು ಎರಡು ತಿಂಗಳ ಒಳಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಮರು ಪಾವತಿಸಬೇಕು’ ಎಂದು ನ್ಯಾಯಪೀಠ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸಿದೆ.

‘ಶಾಸನಾತ್ಮಕವಾಗಿ ಸೂಚಿಸಲಾದ ಶುಲ್ಕ ವಿಧಿಸಲು ಮತ್ತು ಸಂಗ್ರಹಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಅಧಿಕಾರ ಹೊಂದಿದೆ. ಆದರೆ ಅಂತಹ ಯಾವುದೇ ಶಾಸನಗಳ ಅನುಪಸ್ಥಿತಿಯಲ್ಲಿ ಶುಲ್ಕ ಹೆಚ್ಚಳ ಮಾಡುವ ಸಂಬಂಧ ಹೊರಡಿಸಲಾಗಿರುವ ಆಕ್ಷೇಪಾರ್ಹ ಸುತ್ತೋಲೆ ಮಾನ್ಯವಾಗುವುದಿಲ್ಲ. ಹಾಗಾಗಿ ಸುತ್ತೋಲೆಯನ್ನು ರದ್ದುಪಡಿಸಲಾಗಿದೆ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.

‘ಕೆಎಸ್ಎಲ್ಯು ಸಂಯೋಜಿತ ಕಾಲೇಜುಗಳಿಗೆ 2025-26ನೇ ಸಾಲಿನ ವಿವಿಧ ಕೋರ್ಸ್ಗಳ ಪ್ರವೇಶ ಶುಲ್ಕ ಪರಿಷ್ಕರಿಸಿ 2025ರ ಜುಲೈ 2ರಂದು ಹೊರಡಿಸಲಾದ ಸುತ್ತೋಲೆಯನ್ನು ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು. ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಕೆ.ಜಿ.ರಾಘವನ್ ಹಾಗೂ ಹೈಕೋರ್ಟ್ ವಕೀಲ ಎಚ್.ಪವನಚಂದ್ರಶೆಟ್ಟಿ ಮತ್ತಿತರರು ವಾದ ಮಂಡಿಸಿದ್ದರು.