ಬೆಂಗಳೂರು: ‘ಎರಡು ದಶಕಗಳಿಂದ ಈಚೆಗೆ ನಡೆದಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿನ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆಗಳು ಅದರ ಗೌರವವನ್ನು ಅಧೋಗತಿಗೆ ತಂದು ನಿಲ್ಲಿಸಿವೆ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಕೆಪಿಎಸ್ಸಿ ಸದಸ್ಯರ ನೇಮಕಾತಿಗೆ ಈವರೆಗೂ ಸತ್ಯಶೋಧನಾ ಸಮಿತಿಯನ್ನೇ ರಚಿಸದ ರಾಜ್ಯ ಸರ್ಕಾರಗಳ ಧೋರಣೆಯನ್ನು ಕಟು ಪದಗಳಲ್ಲಿ ಖಂಡಿಸಿದೆ.

ಎಂಜಿನಿಯರ್ಗಳ ನೇಮಕಾತಿಗೆ ಸಂಬಂಧಿಸಿದ ಪ್ರಕರಣದಲ್ಲಿ, ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್ಎಟಿ) ಆದೇಶ ಪ್ರಶ್ನಿಸಿ ಎಂಜಿನಿಯರ್ಗಳಾದ ವಿಶ್ವಾಸ್ ಮತ್ತಿತರರು ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ರಾಮಚಂದ್ರ ಡಿ.ಹುದ್ದಾರ ಅವರ ವಿಭಾಗೀಯ ನ್ಯಾಯಪೀಠ, ‘ಕೆಪಿಎಸ್ಸಿ ನೇಮಕಾತಿಯಲ್ಲಿ, ಅಭ್ಯರ್ಥಿಗಳು ತಮಗಿಂತಲೂ ಕೆಳಮಟ್ಟದ ಜ್ಞಾನ ಹೊಂದಿದವರ ಮುಂದೆ ಸಂದರ್ಶನಕ್ಕೆ ಹಾಜರಾಗುವಂತಹ ಸನ್ನಿವೇಶ ದಿಗ್ಭ್ರಮೆ ಹುಟ್ಟಿಸುತ್ತದೆ’ ಎಂದು ನುಡಿದಿದೆ.

‘ಇಲ್ಲಿಯತನಕ ಯಾವುದೇ ಶೋಧನಾ ಸಮಿತಿ ಇರಲಿಲ್ಲ ಮತ್ತು ಸತ್ಯಶೋಧನಾ ಸಮಿತಿ ರಚಿಸಿ, ಅದರ ನೆರವು ಪಡೆಯದೆ ಕೆಪಿಎಸ್ಸಿಗೆ ಸದಸ್ಯರನ್ನು ನೇಮಿಸಲಾಗುತ್ತಿದೆ’ ಎಂಬ ಅಂಶವನ್ನು ಗಂಭೀರವಾಗಿ ಒರೆಗೆ ಹಚ್ಚಿರುವ ನ್ಯಾಯಪೀಠ, ‘ಅನರ್ಹರನ್ನು ಕೆಪಿಎಸ್ಸಿ ಸದಸ್ಯರನ್ನಾಗಿ ನೇಮಿಸಿದರೆ, ಅಂಥವರು ವಿವಿಧ ಜ್ಞಾನಶಾಖೆಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಹೇಗೆ ತಾನೆ ಸಂದರ್ಶನ ನಡೆಸಲು, ಸಂವಾದಿಸಲು ಸಾಧ್ಯವಾಗುತ್ತದೆ’ ಎಂದು ಪ್ರಶ್ನಿಸಿದೆ.

ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ‘ಕೆಪಿಎಸ್ಸಿ ಸದಸ್ಯರ ಆಯ್ಕೆ ಮತ್ತು ನೇಮಕಾತಿಗೆ ನೆರವು ನೀಡಲು ಶೋಧನಾ ಸಮಿತಿಯ ರಚನೆಗೆ ತುರ್ತಾಗಿ ಕೆಲವು ಪ್ರಕ್ರಿಯೆಗಳನ್ನು ರೂಪಿಸಲಾಗುತ್ತಿದೆ. ಇದರ ಪ್ರಗತಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಪೀಠ, ‘ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡಂತಿದೆ. ಸದಸ್ಯರ ನೇಮಕಾತಿಗೆ ಅರ್ಹರ ಹೆಸರು ಶಿಫಾರಸು ಮಾಡಲು ಶೋಧನಾ ಸಮಿತಿಯನ್ನು ರಚಿಸಲು ಆಸಕ್ತಿ ತೋರಿಸುತ್ತಿರುವುದು ಶ್ಲಾಘನೀಯ. ಆದರೆ, ಈ ಕಾರ್ಯವನ್ನು ಯುದ್ಧೋಪಾದಿಯಲ್ಲಿ ನಡೆಸಬೇಕಿದೆ. ಮುಂದಿನ ವಿಚಾರಣೆಯ ವೇಳೆಗೆ ಕೆಲ ನಿಯಮಗಳನ್ನು ಸರ್ಕಾರ ಹೊರತರುತ್ತದೆ’ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದೆ.

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ (ಆರ್ಡಿಪಿಆರ್) ಕುಡಿಯುವ ನೀರು ಪೂರೈಕೆ ವಿಭಾಗದ ಸಹಾಯಕ ಕಾರ್ಯಕಾರಿ ಎಂಜಿನಿಯರ್ಗಳ (ಎಇಇ) ನೇಮಕದಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವ ಕಾರಣ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಕೆಪಿಎಸ್ಸಿ ಮಾಡಿರುವ ಶಿಫಾರಸಿಗೆ ತಡೆ ನೀಡಬೇಕು’ ಎಂಬ ಅರ್ಜಿದಾರರ ಮನವಿಯನ್ನು ಕೆಎಸ್ಎಟಿ ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿಬಿಐ ಅಥವಾ ಎಸ್ಐಟಿಗೆ...

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು ‘ಈಗಾಗಲೇ ಕೆಪಿಎಸ್ಸಿ ಹಗರಣಗಳ ಬಗ್ಗೆ ಸಿಐಡಿ ತನಿಖೆ ತೃಪ್ತಿಕರವಾಗಿ ನಡೆದಿದೆ. ಹೀಗಾಗಿ ಇದನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ’ ಎಂದು ಪ್ರತಿಪಾದಿಸಿದರು.

ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲರಾದ ವಿ.ಲಕ್ಷ್ಮಿನಾರಾಯಣ ಮತ್ತು ಎಂ.ಎಸ್.ಭಾಗವತ್ ಅವರು ‘ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದರೆ ತಮ್ಮದೇನೂ ಅಭ್ಯಂತರವಿಲ್ಲ’ ಎಂದು ನ್ಯಾಯಪೀಠಕ್ಕೆ ಒಪ್ಪಿಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ‘ಇತ್ತೀಚೆಗೆ ಸಮನ್ವಯ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರದಲ್ಲಿ ಆರೋಪಿಯಾಗಿದ್ದ ವಕೀಲೆ ಎಸ್.ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐನ ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲು ಎಸ್ಐಟಿ ರಚಿಸಿರುವಂತೆ; ಈ ಪ್ರಕರಣದಲ್ಲೂ ರಚಿಸಿದರೆ ಹೇಗೆ’ ಎಂಬ ಜಿಜ್ಞಾಸೆ ವ್ಯಕ್ತಪಡಿಸಿತು.

ಅಂತಿಮವಾಗಿ ಎಲ್ಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ‘ಮೈಸೂರು ಮತ್ತು ಕಲಬುರಗಿಗಳಲ್ಲಿ ನೇಮಕಾತಿ ಪಡೆದವರ ತರಬೇತಿಗೆ ಯಾವುದೇ ಕಾನೂನಾತ್ಮಕ ಬಾಧೆ ಇಲ್ಲ ಎಂಬ ಮಧ್ಯಂತರ ಆದೇಶ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿದೆ. ಕೆಪಿಎಸ್ಸಿ ಪರ ಪದಾಂಕಿತ ಹಿರಿಯ ವಕೀಲ ಪಿ.ಎಸ್.ರಾಜಗೋಪಾಲ ಮತ್ತು ಪ್ರಕಾಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.