ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.

‘ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಮತ್ತು ನನ್ನನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು’ ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಈ ಮಹತ್ವದ ಆದೇಶ ನೀಡಿದೆ.

ಆದೇಶವನ್ನು ಚುನಾವಣಾ ಆಯೋಗ ಮತ್ತು ವಿಧಾನಸಭೆ ಕಾರ್ಯದರ್ಶಿಗೆ ಕೂಡಲೇ ರವಾನಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ನ್ಯಾಯಪೀಠ ನಿರ್ದೇಶಿಸಿದೆ. ವಿಸ್ತೃತ ಆದೇಶ ಇನ್ನೂ ಬಿಡುಗಡೆಯಾಗಿಲ್ಲ.

ಇದೇ ವೇಳೆ ಮುನಿರಾಜು ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಲು ನ್ಯಾಯಪೀಠ ಸ್ಪಷ್ಟವಾಗಿ ನಿರಾಕರಿಸಿದೆ.

ನ್ಯಾಯಪೀಠ ತೆರೆದ ನ್ಯಾಯಾಲಯದಲ್ಲಿ ತನ್ನ ಆದೇಶ ಪ್ರಕಟ ಮಾಡುತ್ತಿದ್ದಂತೆಯೇ, ಸುಬ್ಬಾರೆಡ್ಡಿ ಪರ ಹಿರಿಯ ವಕೀಲರು, ‘ನ್ಯಾಯಪೀಠದ ಈ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿಯವರೆಗೆ ಈ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿದರು.

ಈ ಮನವಿಗೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತಂತೆ ಕ್ಲುಪ್ತ ವಾದ-ಪ್ರತಿಪಾದ ಆಲಿಸಿದ ನ್ಯಾಯಪೀಠ, ತನ್ನ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತು. ಸಿ.ಮುನಿರಾಜು ಪರ ಹೈಕೋರ್ಟ್ ವಕೀಲ ಮಂಜುನಾಥ ಹಿರಾಳ್ ವಕಾಲತ್ತು ವಹಿಸಿದ್ದರು. ಪದಾಂಕಿತ ಹಿರಿಯ ವಕೀಲೆ ನಳಿನಾ ಮಾಯೇಗೌಡ ವಾದ ಮಂಡಿಸಿದ್ದರು.

ಪ್ರಕರಣವೇನು?: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ 2023ರ ಮೇ 10ರಂದು ಚುನಾವಣೆ ನಡೆದಿತ್ತು. ಮೇ 13ರಂದು ಫಲಿತಾಂಶ ಪ್ರಕಟವಾಗಿತ್ತು.

ಬಾಗೇಪಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಎನ್.ಸುಬ್ಬಾರೆಡ್ಡಿ 82,128 ಮತಗಳನ್ನು ಪಡೆದು ಜಯಗಳಿಸಿದ್ದರು. ಸಮೀಪದ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು 62,949 ಮತ ಪಡೆಯುವ ಮೂಲಕ 19,179 ಮತಗಳ ಅಂತರದಿಂದ ಸೋಲುಂಡಿದ್ದರು. ಸುಬ್ಬಾರೆಡ್ಡಿ ಆಯ್ಕೆ ಪ್ರಶ್ನಿಸಿ ಸಿ.ಮುನಿರಾಜು 2023ರ ಜೂನ್ 24ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು.

ಆಕ್ಷೇಪ ಏನಿತ್ತು?: ‘ಸುಬ್ಬಾರೆಡ್ಡಿ 2023ರ ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಯಾವುದೇ ಉಮೇದುವಾರ ತನ್ನ ಪತ್ನಿ ಮತ್ತು ಅವಲಂಬಿತರಿಗೆ ಸೇರಿದ ಆಸ್ತಿಗಳು, ಹೊಣೆಗಾರಿಕೆಗಳ ವಿವರಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಬಾಂಡ್, ಶೇರ್ಗಳಲ್ಲಿನ ಹೂಡಿಕೆ, ಸಾಲಪತ್ರಗಳು, ಕಂಪನಿಗಳ ವಿವರ, ಮ್ಯೂಚುವಲ್ ಫಂಡ್, ವೈಯಕ್ತಿಕ ಸಾಲ ಸೇರಿದಂತೆ ಎಲ್ಲಾ ರೀತಿಯ ಹಣಕಾಸು ವಹಿವಾಟುಗಳ ಪಾರದರ್ಶಕ ಮಾಹಿತಿ ಒದಗಿಸಬೇಕು. ಆದರೆ, ಸುಬ್ಬಾರೆಡ್ಡಿ ತಮ್ಮ ನಾಮಪತ್ರದೊಂದಿಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ತಮಗೆ ಸೇರಿದ ಸಂಪತ್ತು, ಸಾಲಗಳು, ಹೊಣೆಗಾರಿಕೆ, ಹೂಡಿಕೆ ಸೇರಿದಂತೆ ಅನೇಕ ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ’ ಎಂದು ಆಕ್ಷೇಪಿಸಿದ್ದರು.

ಕೋರಿಕೆ: ‘ಸುಬ್ಬಾರೆಡ್ಡಿ ಆಯೋಗಕ್ಕೆ ಅಪೂರ್ಣ ಹಾಗೂ ತಪ್ಪು ಮಾಹಿತಿ ನೀಡಿದ್ದಾರೆ. ಇದು ಚುನಾವಣಾ ಅಕ್ರಮಗಳ ವ್ಯಾಪ್ತಿಗೆ ಒಳಪಡಲಿದೆ. ಆದ್ದರಿಂದ, ಸುಬ್ಬಾರೆಡ್ಡಿ ಆಯ್ಕೆಯನ್ನು ರದ್ದುಗೊಳಿಸಬೇಕು. ಎರಡನೇ ಅತಿ ಹೆಚ್ಚು ಮತಗಳಿಸಿರುವ ನನ್ನನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು’ ಎಂದು ಮುನಿರಾಜು ಕೋರಿದ್ದರು.

ಕಾನೂನು ಸಂಘರ್ಷದಲ್ಲಿ ಯಾರ್ಯಾರು?

ಕೆ.ವೈ.ನಂಜೇಗೌಡ (ಕಾಂಗ್ರೆಸ್) ಮಾಲೂರು: ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದಿರುವ ಇವರ ಆಯ್ಕೆಯನ್ನು ಹೈಕೋರ್ಟ್ 2025ರ
ಸೆಪ್ಟೆಂಬರ್ನಲ್ಲಿ ರದ್ದುಪಡಿಸಿತ್ತು. ‘ಮತ ಎಣಿಕೆ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿಲ್ಲ. ಅಕ್ರಮ ಎಸಗಲಾಗಿದೆ’ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಬಿಜೆಪಿಯ ಕೆ.ಎಸ್.ಮಂಜುನಾಥ್ ಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಸಿ.ಕೆ.ರಾಮಮೂರ್ತಿ (ಬಿಜೆಪಿ) ಜಯನಗರ: 2023ರ ಚುನಾವಣೆಯ 827 ಅಂಚೆ ಮತಗಳನ್ನು (ಪೋಸ್ಟಲ್ ಬ್ಯಾಲೆಟ್) ಮರು ಎಣಿಕೆ ಮಾಡುವಂತೆ ಕೋರಿ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ. ವಿಚಾರಣೆ ಆರಂಭವಾಗಿದೆ.

ಸತೀಶ್ ಸೈಲ್ (ಕಾಂಗ್ರೆಸ್) ಕಾರವಾರ: ಸಾವಿರಾರು ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಕಳ್ಳತನ ಮಾಡಿ, ವಿದೇಶಗಳಿಗೆ ಅಕ್ರಮವಾಗಿ ಸಾಗಣೆ ಮಾಡುವ ಮೂಲಕ ರಾಜ್ಯದ ಖಜಾನೆಗೆ ₹200 ಕೋಟಿಗೂ ಹೆಚ್ಚಿನ ಮೊತ್ತದ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಳು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಇದೇ ಪ್ರಕರಣದಲ್ಲಿನ ಎಲ್ಲ ಏಳು ಅಪರಾಧಿಗಳಿಗೆ ಒಟ್ಟು ₹44 ಕೋಟಿಗೂ ಹೆಚ್ಚು ದಂಡ ವಿಧಿಸಿತ್ತು. ವೈದ್ಯಕೀಯ ಜಾಮೀನಿನ ಮೇಲಿದ್ದಾರೆ.

ಕೆ.ಸಿ.ವೀರೇಂದ್ರ (ಕಾಂಗ್ರೆಸ್) ಚಿತ್ರದುರ್ಗ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸದ್ಯ ಜಾಮೀನಿನ ಮೇಲಿದ್ದಾರೆ.

ವಿನಯ ಕುಲಕರ್ಣಿ (ಕಾಂಗ್ರೆಸ್) ಧಾರವಾಡ : ಜಿಲ್ಲಾಪಂಚಾಯಿತಿ
ಸದಸ್ಯರಾಗಿದ್ದ ಯೋಗೇಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿ.
ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಿ. ಜನಾರ್ದನ ರೆಡ್ಡಿ (ಬಿಜೆಪಿ ಸಹ ಸದಸ್ಯ) ಗಂಗಾವತಿ: ಅಕ್ರಮ ಗಣಿಗಾರಿಕೆಯ ಹಲವು ಪ್ರಕರಣಗಳಲ್ಲಿ ಆಪಾದಿತರಾಗಿದ್ದು, ಸದ್ಯ ಜಾಮೀನಿನ ಹೊರಗಿದ್ದಾರೆ.

ಬೈರತಿ ಬಸವರಾಜ (ಬಿಜೆಪಿ) ಕೆ.ಆರ್. ಪುರ: ರೌಡಿ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿ ಆಗಿರುವ ಅವರನ್ನು ಸಿಐಡಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.