ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಅಪರಾಧಿ ಎಂದು ಘೋಷಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಎಂಟು ಪ್ರತ್ಯೇಕ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.

‘ವಿಚಾರಣಾ ನ್ಯಾಯಾಲಯಗಳು ಈಗಾಗಲೇ ಮೌಲ್ಯಮಾಪನ ಮಾಡಿರುವ ಸಾಕ್ಷ್ಯಗಳನ್ನು ಹೊರತುಪಡಿಸಿ ಈ ನ್ಯಾಯಪೀಠ ಸ್ವಂತ ತೀರ್ಮಾನ ಪ್ರಕಟಿಸುವ ಯಾವುದೇ ತುರ್ತು ಈ ಪುನರ್ ಪರಿಶೀಲನಾ ಅರ್ಜಿಗಳಲ್ಲಿ ಕಂಡು ಬರುತ್ತಿಲ್ಲ. ವಿಚಾರಣಾ ನ್ಯಾಯಾಲಯದ ಆದೇಶ ಸೂಕ್ತವಾಗಿಯೇ ಇದೆ’ ಎಂಬ ಅಭಿಪ್ರಾಯದಲ್ಲಿ ನ್ಯಾಯಪೀಠ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.