ಬೆಂಗಳೂರು: ಬಾಲಕಿಯೊಬ್ಬಳ ಸ್ಕ್ಯಾನಿಂಗ್ (ಭ್ರೂಣಲಿಂಗ ಪತ್ತೆ) ವರದಿಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ಪೋಕ್ಸೊ ಕಾಯ್ದೆಯ ನಿಯಮ ಉಲ್ಲಂಘಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ರೇಡಿಯಾಲಜಿ ತಜ್ಞರೊಬ್ಬರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಮೈಸೂರಿನ ಡಾ.ವೈ.ಆರ್.ಹರ್ಷಿತ್ (32) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಅರ್ಜಿದಾರರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ 'ನವಿ ಡಯಾಗ್ನಾಸ್ಟಿಕ್ ಸೆಂಟರ್'ನಲ್ಲಿ ರೇಡಿಯಾಲಜಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಪ್ರಕರಣ: ಲೋಕಾಯುಕ್ತ ಅಧಿಕಾರಿಗಳು ಕೆ.ಆರ್. ಪೇಟೆಯ ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ 2026ರ ಏಪ್ರಿಲ್ 17ರಂದು ಹಠಾತ್ ದಾಳಿ ನಡೆಸಿದ್ದರು. ಈ ವೇಳೆ ಬಾಲಕಿಯೊಬ್ಬಳಿಗೆ ಸ್ಕ್ಯಾನಿಂಗ್ ಮಾಡಿದ ವರದಿಗಳು ದೊರಕಿದ್ದವು.

‘ಹರ್ಷಿತ್ ಅವರು ಮಾಹಿತಿಯನ್ನು ಇಲಾಖೆಗೆ ತಿಳಿಸದೆ ಕರ್ತವ್ಯ ಲೋಪ ಎಸಗಿದ್ದಾರೆ’ ಎಂದು ಆರೋಪಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಕೆ.ಆರ್. ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಹರ್ಷಿತ್ ಅವರನ್ನು ಬಂಧಿಸಲಾಗಿತ್ತು. ಮಂಡ್ಯದ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.