ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ಜನೌಷಧ ಕೇಂದ್ರಗಳನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸರ್ಕಾರದ ಆದೇಶಕ್ಕೆ ತಡೆ ನೀಡುವಂತೆ ಕೋರಿ ಭಾಲ್ಕಿ ತಾಲ್ಲೂಕಿನ ತುಗಾಂವ್ ಹಲಸಿ ನಿವಾಸಿ ಶ್ರೀಕಾಂತ ಅನಂತಾಚಾರ್ಯ ಜೋಶಿ ಸೇರಿದಂತೆ 16 ಜನೌಷಧಿ ಕೇಂದ್ರಗಳ ಮಾಲೀಕರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ (ಕಲಬುರಗಿ) ಈ ಕುರಿತಂತೆ ಆದೇಶಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅನಿರುದ್ಧ ಎ.ಕುಲಕರ್ಣಿ ವಾದ ಮಂಡಿಸಿ ‘ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ನಿಷೇಧಿಸಿ ಇನ್ನು ಮುಂದೆ ಈ ಕೇಂದ್ರಗಳ ಹಂಚಿಕೆ ಸ್ಥಗಿತಗೊಳಿಬೇಕು ಎಂದು ರಾಜ್ಯ ಸರ್ಕಾರ 2025ರ ಮೇ 14ರಂದು ಹೊರಡಿಸಿರುವ ಆದೇಶವು ಏಕಪಕ್ಷೀಯವಾಗಿದ್ದು ಸಹಜ ನ್ಯಾಯತತ್ವಕ್ಕೆ ವಿರುದ್ಧವಾಗಿದೆ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದ ಪ್ರತಿವಾದಿಗಳ ಪರವಾದ ಯಾವುದೇ ಏಜೆಂಟರು ಸೇವಕರು ಅಥವಾ ಯಾರಾದರೂ ಅವರ ಹೆಸರು ಹೇಳಿಕೊಂಡು ಬಲವಂತದ ಕ್ರಮಕ್ಕೆ ಮುಂದಾಗದಂತೆ ಆದೇಶಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ‘ಅರ್ಜಿದಾರರ ಜನೌಷಧಿ ಕೇಂದ್ರಗಳನ್ನು ಪ್ರತಿಬಂಧಿಸಬಾರದು’ ಎಂದು ಆದೇಶಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಸರ್ಕಾರದ ವೈದ್ಯಕೀಯ ಹಾಗೂ ಔಷಧೀಯ ಬ್ಯೂರೊ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?: ‘ಜನೌಷಧ ಕೇಂದ್ರಗಳು ಶೇ 50ರಿಂದ 90ರವರೆಗೂ ಕಡಿಮೆ ದರದಲ್ಲಿ ಔಷಧಗಳನ್ನು ಒದಗಿಸುತ್ತವೆ. ಇದರಿಂದ ಬಡತನ ರೇಖೆಗಿಂತ ಕೆಳಗಿರುವವರು ಹಿರಿಯ ನಾಗರಿಕರು ದಿನಗೂಲಿ ನೌಕರರು ದೀರ್ಘಕಾಲದ ರೋಗಗಳಿಂದ ಬಳಲುತ್ತಿರುವವರು ಮತ್ತು ನಿತ್ಯವೂ ಔಷಧಗಳ ಅಗತ್ಯ ಹೊಂದಿರುವವರಿಗೆ ಈ ಸೇವೆ ಅತ್ಯಂತ ಸಹಕಾರಿಯಾಗಿದೆ. ಇಂತಹ ಔಷಧ ಮಳಿಗೆಗಳನ್ನು ಸ್ಥಗಿತಗೊಳಿಸಿರುವುದು ಸಾರ್ವಜನಿಕರ ಆರೋಗ್ಯದ ಹಕ್ಕಿನ ಮೇಲೆ ದುಷ್ಪರಿಣಾಮ ಬೀರಲಿದೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.