ಬೆಂಗಳೂರು: ‘ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸಬಾರದು’ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಈ ಸಂಬಂಧ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿರುವ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ರಜಾಕಾಲೀನ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಂ.ಆರ್.ಬಾಲಕೃಷ್ಣ ಅವರ ವಾದ ಆಲಿಸಿದ ನ್ಯಾಯಪೀಠ ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರವರೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಸಹಾಯಕ ಆಯುಕ್ತ, ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ?: ‘ನನ್ನನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಇದೇ 18ರಂದು ಆದೇಶ ಹೊರಡಿಸಿರುವುದು ಕಾನೂನು ಬಾಹಿರ ಮತ್ತು ಏಕಪಕ್ಷೀಯ ಕ್ರಮದಿಂದ ಕೂಡಿದೆ. ಆದ್ದರಿಂದ, ಗಡಿಪಾರು ಆದೇಶ ರದ್ದುಪಡಿಸಬೇಕು’ ಎಂದು ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿಯಲ್ಲಿ ಕೋರಿದ್ದಾರೆ.
.ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ.ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ನೋಟಿಸ್ ಜಾರಿ .ಬೆಳ್ತಂಗಡಿ ಠಾಣೆ, SIT ಕಚೇರಿಗೆ ಮಹೇಶ್ ಶೆಟ್ಟಿ ತಿಮರೋಡಿ ಹಾಜರು.ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿದ ಎಸ್ಐಟಿ ಅಧಿಕಾರಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.