ಬೆಂಗಳೂರು: ‘ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಕೇತಗಾನಹಳ್ಳಿ ಸರ್ವೇ ನಂಬರ್ 91ರಲ್ಲಿ ಸ್ಥಳೀಯ ರೈತರಿಗೆ 1999ರಲ್ಲಿ ಮಂಜೂರು ಮಾಡಲಾದ 105 ಎಕರೆ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ಭೂಮಾಲೀಕ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ’ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಭೂ ಮಾಲೀಕ ರೈತರ ಪರವಾಗಿ ಶ್ರೀನಿವಾಸಪುರ ಪಿ–ಕಾರ್ಡ್ ಬ್ಯಾಂಕ್ (ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್) ಅಧ್ಯಕ್ಷ ಡಿ.ವಿ.ಅಶೋಕ್ ಹಾಗೂ ಕೆಎಂಎಫ್ (ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ) ನಿರ್ದೇಶಕ ಕೆ.ಎಂ.ಮಂಜುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಸ್.ಪಿ.ಕುಲಕರ್ಣಿ ಅವರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ಅರಣ್ಯ ಇಲಾಖೆ ಕಾರ್ಯದರ್ಶಿ, ಕೋಲಾರ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ, ಶ್ರೀನಿವಾಸಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಶ್ರೀನಿವಾಸಪುರ ತಹಶೀಲ್ದಾರ್ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಂತೆಯೇ, ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿತು.

ಪ್ರಕರಣವೇನು?

‘ಕೇತಗಾನಹಳ್ಳಿಯ ಸರ್ವೇ ನಂಬರ್ 91ರ ಒಟ್ಟು 257 ಎಕರೆ 33 ಗುಂಟೆ ಜಮೀನಿನಲ್ಲಿ 105 ಎಕರೆ 35 ಗುಂಟೆ ಜಮೀನನ್ನು ಸ್ಥಳೀಯ ಭೂರಹಿತ ರೈತರಿಗೆ 1999ರಲ್ಲಿ ಮಂಜೂರು ಮಾಡಲಾಗಿತ್ತು. ಕಂದಾಯ ದಾಖಲೆಗಳಲ್ಲಿ ಮಂಜೂರಾದ ರೈತರ ಹೆಸರು ನಮೂದಾಗಿದೆ. ಈ ರೈತರು ತಮ್ಮ ಕಾನೂನುಬದ್ಧ ಜಮೀನಗಳಲ್ಲಿ ಅನೂಚಾನವಾಗಿ ಕೃಷಿ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದಾರೆ. ಆದರೆ, ಅರಣ್ಯ ಅಧಿಕಾರಿಗಳು ನೋಟಿಸ್ ನೀಡದೆ ಏಕಾಏಕಿ ನಮ್ಮನ್ನು ಒಕ್ಕಲೆಬ್ಬಿಸಲು ಮುಂದಾಗಿದ್ದಾರೆ. ಬಲವಂತದಿಂದ ಜಮೀನುಗಳಲ್ಲಿನ, ಬೆಳೆದ ಬೆಳೆಯನ್ನು ಕಿತ್ತು ಬಿಸಾಡುತ್ತಿದ್ದಾರೆ. ಅಮೂಲ್ಯ ಸಸ್ಯಸಂಕುಲವನ್ನು ನಾಶಪಡಿಸುತ್ತಿದ್ದಾರೆ. ಕೂಡಲೇ ಇದನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು ಮತ್ತು ರೈತರ ಹಕ್ಕುಗಳನ್ನು ಎತ್ತಿಹಿಡಿಯಲು ಆದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.