ಬೆಂಗಳೂರು: ‘ಕಾಡುಗಳ್ಳ ವೀರಪ್ಪನ್ ಸೆರೆಹಿಡಿಯವ ಕಾರ್ಯಾಚರಣೆ ವೇಳೆ ಕರ್ನಾಟಕ-ತಮಿಳುನಾಡು ಜಂಟಿ ವಿಶೇಷ ಕಾರ್ಯಪಡೆಯ (ಜೆಎಸ್ಟಿಎಫ್) ಕಿರುಕುಳಕ್ಕೆ ಒಳಗಾದ 89 ಸಂತ್ರಸ್ತರಿಗೆ ನೀಡಬೇಕಿರುವ ಬಾಕಿ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂಬ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಸಂತ್ರಸ್ತರ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕೊಳತ್ತೂರು ವ್ಯಾಪ್ತಿಯಲ್ಲಿರುವ ಚಿನ್ನತಾಂಡದ ‘ವಿಡಿಯಾಳ್ ಪೀಪಲ್ ವೆಲ್ಫೇರ್ ಫೌಂಡೇಷನ್’ ವ್ಯವಸ್ಥಾಪಕ ನಿರ್ದೇಶಕ ಮುರುಗೇಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಪ್ರತಿವಾದಿ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ ವಿಚಾರಣೆಯನ್ನು ಫೆಬ್ರವರಿ 11ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ ಏನಿದೆ?: ‘ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ವೇಳೆ ವಿಶೇಷ ಕಾರ್ಯಾಪಡೆಯ ಕಿರುಕುಳ, ಅಮಾನವೀಯ ವರ್ತನೆಯಿಂದ 89 ಮಂದಿ ಸಂತ್ರಸ್ತರಾಗಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕು ಆಯೋಗ ಗುರುತಿಸಿತ್ತು. ಇವರೆಲ್ಲರಿಗೂ ತಲಾ ₹5 ಕೋಟಿಯಂತೆ ₹10 ಕೋಟಿ ಪರಿಹಾರ ನೀಡುವಂತೆ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಕ್ಕೆ ಆದೇಶಿಸಲಾಗಿತ್ತು. ಉಭಯ ರಾಜ್ಯ ಸರ್ಕಾರಗಳು ಈತನಕ ಕೇವಲ ₹2.80 ಕೋಟಿ ಮಾತ್ರ ಬಿಡುಗಡೆ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.