ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಪಿಪಿ ನೇಮಕಾತಿ ಅಕ್ರಮ: ವಿಚಾರಣೆಗೆ ಹೈಕೋರ್ಟ್‌ ಅನುವು

Published 23 ಫೆಬ್ರುವರಿ 2024, 14:41 IST
Last Updated 23 ಫೆಬ್ರುವರಿ 2024, 14:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 2013-14ನೇ ಸಾಲಿನಲ್ಲಿ ನಡೆದಿದ್ದ ಸುಮಾರು 180 ಸಹಾಯಕ ಪಬ್ಲಿಕ್‌ ಪ್ರಾಸಿಕ್ಯೂಟರ್‌ (ಎಪಿಪಿ) ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿದ್ದ 36 ಮಂದಿ ಪ್ರಾಸಿಕ್ಯೂಟರ್‌ಗಳ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಕುರಿತಂತೆ ಕಲಬುರಗಿಯ ಛಾಯಾದೇವಿ ಸೇರಿದಂತೆ ವಿವಿಧ ಜಿಲ್ಲೆಗಳ ಕೋರ್ಟ್‌ಗಳಲ್ಲಿ  ಪಬ್ಲಿಕ್‌ ಪ್ರಾಸಿಕ್ಯೂಟರ್‌ಗಳಾಗಿ ನೇಮಕಗೊಂಡು ಸದ್ಯ ಅಮಾನತ್ತಿನಲ್ಲಿರುವ 36 ಎಪಿಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಆರ್‌. ನಟರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ. ಇದರಿಂದಾಗಿ 36 ಆರೋಪಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಸಿರು ನಿಶಾನೆ ದೊರೆತಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT