ಬೆಂಗಳೂರು: ತಮ್ಮನ್ನು ಮಹಿಳೆಯರು ಎಂದು ಗುರುತಿಸಿಕೊಂಡಿರುವ ನಗರದ ಇಬ್ಬರು ಲೈಂಗಿಕ ಅಲ್ಪಸಂಖ್ಯಾತರಿಗೆ ‘ಹಾರ್ಮೋನ್ ಬದಲಿಸುವ ಥೆರಪಿ’ (ಎಚ್ಆರ್ಟಿ) ಮುಂದುವರಿಸುವಂತೆ ಸಂಬಂಧಿಸಿದ ವೈದ್ಯರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

‘ಟ್ರಾನ್ಸ್ಜೆಂಡರ್ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಕಾಯ್ದೆ’ ತಿದ್ದುಪಡಿ ಪ್ರಶ್ನಿಸಿ ಈ ಇಬ್ಬರು ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲೆ ಜಯ್ನಾ ಕೊಠಾರಿ, ‘ಅರ್ಜಿದಾರರಿಬ್ಬರೂ ನಗರದ ರಾಮಯ್ಯ ಆಸ್ಪತ್ರೆಯಲ್ಲಿ ‘ಹಾರ್ಮೋನ್ ರಿಪ್ಲೇಸ್ಮೆಂಟ್ ಥೆರಪಿ’ ಪಡೆಯುತ್ತಿದ್ದಾರೆ. ಆದರೆ, ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ಬಳಿಕ ವೈದ್ಯರು ಚಿಕಿತ್ಸೆ ಮುಂದುವರಿಸಲು ಹಿಂಜರಿಯುತ್ತಿದ್ದಾರೆ. ವೈದ್ಯಕೀಯ ಚಿಕಿತ್ಸೆ ಪಡೆಯುವುದನ್ನು ನಿರ್ಬಂಧಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ’ ಎಂದು ಪ್ರತಿಪಾದಿಸಿದ್ದರು.

ಇದನ್ನು ಅಲ್ಲಗಳೆದಿದ್ದ ಕೇಂದ್ರ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್, ‘ಅರ್ಜಿದಾರರಿಗೆ ಚಿಕಿತ್ಸೆ ನೀಡುವುದನ್ನು ನಿರಾಕರಿಸಿದ ಅಥವಾ ನಿರ್ಬಂಧಿಸಿರುವುದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳನ್ನು ಪ್ರಸ್ತುತಪಡಿಸಲಾಗಿಲ್ಲ. ಈ ಹಂತದಲ್ಲಿ ಕಾಯ್ದೆಯ ತಿದ್ದುಪಡಿ ಮಾನ್ಯತೆಯನ್ನು ನಿರ್ಧರಿಸುವುದು ಸರಿಯಲ್ಲ. ಯಾಕೆಂದರೆ, ಈ ಕುರಿತಾದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇದೆ. ಹೀಗಾಗಿ, ಅರ್ಜಿದಾರರ ಮಧ್ಯಂತರ ಮನವಿಯನ್ನು ಮಾನ್ಯ ಮಾಡಬಾರದು’ ಎಂದು ವಿನಂತಿಸಿದ್ದರು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರು ಪ್ರಸ್ತುತಪಡಿಸಿರುವ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದರೆ ಮೇಲ್ನೋಟಕ್ಕೆ ಇವರು 2024ರ ನವೆಂಬರ್ 11ರಿಂದಲೂ ಹಾರ್ಮೋನ್ ಬದಲಾವಣೆ ಥೆರಪಿ ಮಾಡಿಸಿಕೊಳ್ಳುತ್ತಿರುವುದು ದೃಢಪಡುತ್ತದೆ. ಇಂತಹ ಸಂದರ್ಭದಲ್ಲಿ ವೈದ್ಯಕೀಯ ಚಿಕಿತ್ಸೆ ಸ್ಥಗಿತಗೊಳಿಸುವುದು ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟುಮಾಡುತ್ತದೆ’ ಎಂದು ಅಭಿಪ್ರಾಯಪಟ್ಟಿದೆ.

‘ವೈದ್ಯಕೀಯ ಶಿಷ್ಟಾಚಾರದ ಪ್ರಕಾರ ಅರ್ಜಿದಾರರಿಗೆ ನೀಡಲಾಗುತ್ತಿರುವ ಹಾರ್ಮೋನ್ ಬದಲಿ ಚಿಕಿತ್ಸೆ ಮುಂದುವರಿಸಲು ಅನುಮತಿ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ವೈದ್ಯರು ಮತ್ತು ವೈದ್ಯಕೀಯ ಅಧಿಕಾರಿಗಳು ಅಂತಹ ಚಿಕಿತ್ಸೆಯನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಸಲು ಅನುಕೂಲ ಮಾಡಿಕೊಡಬೇಕು’ ಎಂದು ಆದೇಶಿಸಿದೆ.

‘ಅರ್ಜಿದಾರರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಮುಂದುವರಿಕೆ ಹಾಲಿ ಅರ್ಜಿಯ ನಿರ್ಧಾರ ಮತ್ತು ಸುಪ್ರೀಂ ಕೋರ್ಟ್ ಹೊರಡಿಸುವ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದೂ ಇದೇ ವೇಳೆ ಸ್ಪಷ್ಟಪಡಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಬೇಸಿಗೆ ರಜೆಯ ನಂತರಕ್ಕೆ ಮುಂದೂಡಿದೆ.

‘ಕೇಂದ್ರ ಸರ್ಕಾರ 2026ರ ಮಾರ್ಚ್ 30ರಂದು, ಟ್ರಾನ್ಸ್ಜೆಂಡರ್ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಕಾಯ್ದೆ–2026ಕ್ಕೆ ತಿದ್ದುಪಡಿ ಮಾಡಿರುವುದು, ಸಂವಿಧಾನದ 14, 15(1), 16, 19 ಮತ್ತು 21ನೇ ವಿಧಿಗಳ ಉಲ್ಲಂಘನೆಯಾಗಿದ್ದು, ಇದನ್ನು ರದ್ದುಗೊಳಿಸಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.