ಅಲೋಕ್ ಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಅವರು, ‘ವಿಚಾರಣಾ ನ್ಯಾಯಾಲಯವು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಇಲ್ಲದೇ ಪ್ರಾಸಿಕ್ಯೂಷನ್‌ಗೆ ಒಳಪಡಿಸುವ ದಿಸೆಯಲ್ಲಿ ಸಂಜ್ಞೇಯ ಅಪರಾಧ ಎಂದು ಪರಿಗಣಿಸಿದ್ದಾರೆ. ದಂಡ ಪ್ರಕ್ರಿಯಾ ಸಂಹಿತೆ–1973ರ ಕಲಂ 195ರ ಅಡಿ ಇಂತಹ ಕ್ರಮಕ್ಕೆ ಅವಕಾಶವಿಲ್ಲ. ಅಂತೆಯೇ, ಫಿರ್ಯಾದುದಾರರಾದ ಮಮತಾ ಸಿಂಗ್ ಈಗಾಗಲೇ ತೀರಿಕೊಂಡಿದ್ದಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅಲೋಕ್ ಪ್ರಕರಣ ರದ್ದುಗೊಳಿಸಿ ಆದೇಶಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.