‘ನನ್ನ ವಿರುದ್ಧ ಕಾಟನ್‌ಪೇಟೆ ಠಾಣೆ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಹಾಗೂ 5ನೇ ಎಸಿಎಂಎಂ ನ್ಯಾಯಾಲಯದಲ್ಲಿರುವ ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಮಾನ್ಯ ಮಾಡಿದರು.