ಬೆಂಗಳೂರು: ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಸೂಕ್ತವೆಂದು ಆಯ್ಕೆಯಾದ 83 ಅಭ್ಯರ್ಥಿಗಳ ಪಟ್ಟಿಯನ್ನು ಹೈಕೋರ್ಟ್ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಅವರು ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ.

‘ಮಹಿಳೆಯರು, ಮಾಜಿ ಸೈನಿಕರು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಕೋಟಾದಡಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದ ಕಾರಣ ಅವುಗಳನ್ನು ಮುಂದಿನ ಗುಣೋತ್ಕೃಷ್ಟ ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗಿದೆ’ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

‘2025ರ ಡಿಸೆಂಬರ್ನಲ್ಲಿ ನಡೆದ ಸ್ಪರ್ಧಾತ್ಮಕ ಲಿಖಿತ ಮತ್ತು 2026ರ ಜನವರಿಯಲ್ಲಿ ನಡೆದ ಮೌಖಿಕ (ವೈವಾ-ವೋಸ್) ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಡಿ ಅರ್ಹತೆಯ ಕ್ರಮಕ್ಕೆ ಅನುಗುಣವಾಗಿ ಈ ಆಯ್ಕೆ ನಡೆದಿದೆ’ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.