ಬೆಂಗಳೂರು: ‘ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಕೋಲಾರ ಜಿಲ್ಲೆಯ ಮುಳಬಾಗಿಲು ಹಾಗೂ ಚಿಕ್ಕಬಳ್ಳಾಪುರ ನಗರಸಭೆಗಳು, ಹಾಸನ ಜಿಲ್ಲೆಯ ಹೊಳೆನರಸೀಪುರ, ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆಗಳ ಚುನಾಯಿತ ಸದಸ್ಯರ ಅವಧಿ ಪೂರ್ಣಗೊಳ್ಳುವ ತನಕ ಈ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ಅರ್ಜಿದಾರ ಚುನಾಯಿತ ಸದಸ್ಯರು ಸಲ್ಲಿಸಿರುವ ಪ್ರತ್ಯೇಕ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ, ‘ಅರ್ಜಿದಾರ ಚುನಾಯಿತ ಸದಸ್ಯರ ಅವಧಿ ಮುಗಿಯುವ ತನಕ ಅಲ್ಲಿನ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಾರದು’ ಎಂದು ಆದೇಶಿಸಿತು.

ಪ್ರಕರಣದ ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆಯಾ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿತು. ಅಂತೆಯೇ, ‘ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.