ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಪಿಸಿಬಿಯಿಂದ ಶಾಂತ್ ಎ. ತಿಮ್ಮಯ್ಯ ಬದಲು: ಅಧಿಸೂಚನೆಗೆ ಹೈಕೋರ್ಟ್ ತಡೆ

Published 1 ಸೆಪ್ಟೆಂಬರ್ 2023, 17:49 IST
Last Updated 1 ಸೆಪ್ಟೆಂಬರ್ 2023, 17:49 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಶಾಂತ್ ಎ. ತಿಮ್ಮಯ್ಯ ಅವರನ್ನು ಬದಲಾಯಿಸಿರುವುದಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

"ನನ್ನನ್ನು ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಜಯರಾಮ್ ಅವರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ" ಎಂದು ಆಕ್ಷೇಪಿಸಿ ಶಾಂತ್.ಎ. ತಿಮ್ಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದ್ದು ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಿದೆ.

"ಅರ್ಜಿಯ ಮುಂದಿನ ವಿಚಾರಣೆವರೆಗೆ ಕೆಎಸ್‌ಪಿಸಿಬಿ ಅಧ್ಯಕ್ಷರನ್ನು ಬದಲಿಸಬಾರದು. ಜಯರಾಮ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಸೂಚಿಸಿರುವ ಸರ್ಕಾರದ ತಿದ್ದುಪಡಿಯನ್ನು ಅಮಾನತ್ತಿನಲ್ಲಿ ಇರಿಸಬೇಕು" ಎಂದು ನ್ಯಾಯಪೀಠ ಆದೇಶಿಸಿದೆ.

"ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನದಲ್ಲಿದ್ದ ಶಾಂತ್ ಎ. ತಿಮ್ಮಯ್ಯ ಅವರ ಅವಧಿ ಮುಗಿದಿದ್ದು ಅವರ ಸ್ಥಾನಕ್ಕೆ ಹೊಸದಾಗಿ ನೇಮಕಾತಿ ನಡೆಸಬೇಕಿದೆ. ನೇಮಕಾತಿ ನಡೆಯುವರೆಗೂ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿಯನ್ನು ಕೆಎಸ್‌ಪಿಸಿಬಿ ಅಧ್ಯಕ್ಷರಾಗಿ ಮುಂದುವರಿಯುವಂತೆ ಹೆಚ್ಚುವರಿ ಜವಾಬ್ದಾರಿ ಹೊರಿಸಲಾಗಿದೆ" ಎಂದು ಸರ್ಕಾರ ಗುರುವಾರವಷ್ಟೇ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಶಾಂತ್ ಎ. ತಿಮ್ಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT