ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಪ್ರಿಯಾಂಕ ಖರ್ಗೆ, ಶಾಸಕ ಎಚ್.ಡಿ ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌

Published 2 ಆಗಸ್ಟ್ 2023, 23:29 IST
Last Updated 2 ಆಗಸ್ಟ್ 2023, 23:29 IST
ಅಕ್ಷರ ಗಾತ್ರ

ಬೆಂಗಳೂರು: ‘ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸದೆ, ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ‘ ಎಂಬ ಆರೋಪದಡಿ ಚಿತ್ತಾಪೂರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಸಮನ್ಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಚುನಾವಣಾ ತಕರಾರು ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿದರು.

ಅಂತೆಯೇ, ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಅವರ ಆಯ್ಕೆಯಲ್ಲೂ ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೂ ಸಮನ್ಸ್ ಜಾರಿಗೊಳಿಸಲಾಗಿದೆ.

ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT