ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಅಥವಾ ಬಲವಂತದ ಮತಾಂತರ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಜಾರಿಗೊಂಡಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ’ ಅಡಿ ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿವೆ.

ಆದರೆ, ಪ್ರೇಮದ ಮೂಲಕ ಧರ್ಮಾಂತರ (ಲವ್ ಜಿಹಾದ್) ಆರೋಪಗಳ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಮಾಹಿತಿ ನೀಡಿದ್ದಾರೆ.

ವಿಧಾನ ಪರಿಷತ್ನಲ್ಲಿ ಬಿಜೆಪಿಯ ಡಿ.ಎಸ್. ಅರುಣ್ ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ.

‘2023ರಲ್ಲಿ 10, 2024ರಲ್ಲಿ 3, 2025ರಲ್ಲಿ 4 ಬಲವಂತದ ಮತಾಂತರ ಪ್ರಕರಣಗಳು ದಾಖಲಾಗಿವೆ. 2026ರಲ್ಲಿ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. 17 ಪ್ರಕರಣಗಳ ಪೈಕಿ, ಮೂರು ಪ್ರಕರಣಗಳು ತನಿಖೆಯಲ್ಲಿವೆ. ಏಳು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ. ಮೂರು ಪ್ರಕರಣಗಳಲ್ಲಿ ಪೊಲೀಸರು ‘ಬಿ’ ಅಂತಿಮ ವರದಿ ಸಲ್ಲಿಸಿದ್ದಾರೆ. ಯಾವುದೇ ಪ್ರಕರಣಗಳಲ್ಲಿ ಶಿಕ್ಷೆ ಆಗಿಲ್ಲ’ ಎಂದು ತಿಳಿಸಿದ್ದಾರೆ.

‘ಲವ್ ಜಿಹಾದ್ ಮತ್ತು ಬಲವಂತದ ಮತಾಂತರ ಪ್ರಕರಣಗಳನ್ನು ತಡೆಯಲು ದೂರು ಬಂದ ತಕ್ಷಣ ಸಂಬಂಧಿಸಿದ ಕಾನೂನುಗಳಡಿ (ಬಿಎನ್ಎಸ್, ಪೋಕ್ಸೊ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವ ಜೊತೆಗೆ, ಪ್ರಕರಣಗಳನ್ನು ತಡೆಯಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಮತೀಯ ಗೂಂಡಾಗಳು ಕಂಡುಬಂದರೆ, ಅಂತವರನ್ನು ಗುರುತಿಸಿ ರೌಡಿ ಪಟ್ಟಿ ದಾಖಲಿಸಿ ಗಡಿಪಾರು ಮಾಡಲಾಗುತ್ತಿದೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.