ಬೆಂಗಳೂರು: ವಿವಿಧ ವಸತಿ ಯೋಜನೆಗಳ ಅಡಿ ಮನೆಗಳ ನಿರ್ಮಾಣಕ್ಕೆ ಅಗತ್ಯ ಇರುವ ಅನುದಾನ ಹಂಚಿಕೆ ಕುರಿತು ಪ್ರಸ್ತಾವಗಳನ್ನು ಸಲ್ಲಿಸುವಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಜಾರಿಯಲ್ಲಿರುವ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ಬುಧವಾರ ನಡೆಸಿದ ಅವರು, ‘ಮನೆಗಳ ನಿರ್ಮಾಣವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಹಸ್ತಾಂತರಿಸಲು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದ್ದಾರೆ.

‘ಹಿಂದೆ ನಮ್ಮ ಸರ್ಕಾರ ಇದ್ದಾಗ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ನಗರ) 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿತ್ತು. ಈ ಪೈಕಿ, 13,303 ಮನೆಗಳು ಬಹುತೇಕ ಪೂರ್ಣಗೊಂಡಿವೆ. ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ. ಇದರಲ್ಲಿ ಫಲಾನುಭವಿಗಳ ವಂತಿಕೆ ₹ 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7,900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ₹ 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ, ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವ ಸಿದ್ಧಪಡಿಸಬೇಕು’ ಎಂದೂ ಅಧಿಕಾರಿಗಳಿಗೆ ಸಿದ್ದರಾಮಯ್ಯ ಹೇಳಿದ್ದಾರೆ.

‘ಬಜೆಟ್ನಲ್ಲಿ ಅಂಬೇಡ್ಕರ್ ವಸತಿ ಯೋಜನೆಯಡಿ (ಗ್ರಾಮೀಣ) ₹ 900 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಈ ಯೋಜನೆಯಡಿ 94,939 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, 56,682 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ’ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.

‘ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್) ಅಡಿ 42 ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು’ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ವಸತಿ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.