ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ಇದೇ 24ರಂದು ವಿಶೇಷ ಸಚಿವ ಸಂಪುಟ ಸಭೆ ನಿಗದಿ ಯಾಗಿದೆ. ಈ ವಿಷಯವಾಗಿ ಚರ್ಚಿಸಲು ಈ ಹಿಂದೆ ವಿಶೇಷ ಸಂಪುಟ ಸಭೆ ಕರೆಯಲಾಗಿತ್ತು. ಆದರೆ, ಅದೇ ವೇಳೆ ಎರಡು ಕ್ಷೇತ್ರಗಳ ಉಪ ಚುನಾವಣೆ ಘೋಷಣೆಯಾಗಿದ್ದರಿಂದ ವಿಶೇಷ ಸಂಪುಟ ಸಭೆಯನ್ನು ಮುಂದೂಡಲಾಗಿತ್ತು. ಮುಂದಿನ ವಾರ ನಡೆಯಲಿರುವ ಸಭೆಯಲ್ಲಿ ಒಳ ಮೀಸಲಾತಿ ಕುರಿತು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಗುರುವಾರ ( ಏ.16) ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಯನ್ನು ಪ್ರತಿನಿಧಿಸುವ ಸಚಿವರು ಈ ವಿಷಯ ಪ್ರಸ್ತಾಪಿಸಿದರು. ಹೀಗಾಗಿ ವಿಶೇಷ ಸಂಪುಟ ಸಭೆ ನಡೆಸಲು ನಿರ್ಧರಿಸಲಾಯಿತು ಎಂದು ಸರ್ಕಾರದ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.