ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳ ನವೀಕರಣ, ಮಾನ್ಯತೆಗೆ ಆನ್‌ಲೈನ್‌ ಸೇವೆ

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಚಾಲನೆ l ಹೊಸ ವ್ಯವಸ್ಥೆ ಹೆಚ್ಚು ಪಾರದರ್ಶಕ
Last Updated 3 ಮಾರ್ಚ್ 2023, 19:56 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ಶಾಲೆಗಳಿಗೆ ವಿವಿಧ ಸೇವೆಗಳನ್ನು ಒದಗಿಸಲು ಆನ್‌ಲೈನ್‌ ವ್ಯವಸ್ಥೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಾರಿಗೊಳಿಸಿದೆ.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಶುಕ್ರವಾರ ಈ ವ್ಯವಸ್ಥೆಗೆ ಚಾಲನೆ ನೀಡಿದರು. ಖಾಸಗಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಆರಂಭಿಸಲು ಅನುಮತಿ, ನೋಂದಣಿ, ಮಾನ್ಯತೆ, ನವೀಕರಣ ಹಾಗೂ ಕೇಂದ್ರ ಪಠ್ಯಕ್ರಮ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಪಡೆಯುವ ಸೇವೆಗಳನ್ನು ಒದಗಿಸಲು ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಹೊಸ ವ್ಯವಸ್ಥೆಯು ಹೆಚ್ಚು ಪಾರದರ್ಶಕ ಮತ್ತು ಸರಳವಾಗಿದೆ. ಅಲ್ಪ ಸಮಯದಲ್ಲೇ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳಬಹುದಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಆಡಳಿತ ಮಂಡಳಿಗಳು ಹೊಸ ಸಾಫ್ಟ್‌ವೇರ್‌ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕು. ಇಲಾಖಾ ವೆಬ್‌ಸೈಟ್‌ನ ಮುಖಪುಟದಲ್ಲಿ ಇದಕ್ಕೆ ಸಂಬಂಧಿಸಿದ ಲಿಂಕ್‌ ದೊರೆಯಲಿದೆ. ಶಾಲೆಗಳ ನೋಂದಣಿ ಪ್ರಕ್ರಿಯೆಯನ್ನು ಸುಧಾರಿಸಲಾಗಿದ್ದು, ಈಗ ಕೇವಲ ನಾಲ್ಕು ಹಂತಗಳಲ್ಲಿ ಮುಗಿಯಲಿದೆ ಎಂದು ವಿವರಿಸಿದರು.

ಆಡಳಿತ ಮಂಡಳಿಗಳ ಅರ್ಜಿ ಸಲ್ಲಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತವನ್ನು ಕಡಿತಗೊಳಿಸಿ ನೇರವಾಗಿ ಉಪನಿರ್ದೇಶಕರ ಹಂತಕ್ಕೆ ಸಲ್ಲಿಸುವಂತೆ ಕ್ರಮಕೈಗೊಳ್ಳಲಾಗಿದೆ. ತ್ರಿಸದಸ್ಯ ಸಮಿತಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಲ್ಲ ಶಾಲೆಗಳ ಸ್ಥಳ ಪರಿಶೀಲನೆಗೆ ಭೇಟಿ ನೀಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಸ್ವೀಕೃತ ಒಟ್ಟು ಅರ್ಜಿಗಳಲ್ಲಿ ಶೇ 5ರಷ್ಟು ಮಾತ್ರ ಆಯ್ಕೆ ಮಾಡಿ ಶಾಲೆಗಳ
ಸ್ಥಳ ಪರಿಶೀಲನೆಗೆ ಸಮಿತಿ ಭೇಟಿ ನೀಡಲಿದೆ. ಈ ತಪಾಸಣೆಗೆ ಆಯ್ಕೆಯಾಗುವ ಶಾಲೆಗಳ ಮಾಹಿತಿ ಸಂಪೂರ್ಣವಾಗಿ ತಂತ್ರಜ್ಞಾನ ಆಧಾರಿತವಾಗಿದ್ದು, ನೇರವಾಗಿ ಅನುಷ್ಠಾನ ಹಂತಕ್ಕೆ ಮಾಹಿತಿ ತಲುಪುತ್ತದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT