ಬೆಂಗಳೂರು: ರಾಜ್ಯದಲ್ಲಿ ₹15,441.17 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ರಾಜ್ಯ ಉನ್ನತಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಅನುಮೋದನೆ ನೀಡಿದ್ದು, ಯೋಜನೆಗಳು ಕಾರ್ಯಗತಗೊಂಡರೆ 5,277 ಜನರಿಗೆ ಉದ್ಯೋಗ ಲಭಿಸಲಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ 65ನೇ ಸಭೆಯಲ್ಲಿ ನಾಲ್ಕು ಹೊಸ, ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವ ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವ ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ ₹2,406 ಕೋಟಿ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ, ದಾಲ್ಮಿಯಾ(ಭಾರತ್) ಸಂಸ್ಥೆಯ ₹3,000 ಕೋಟಿ ಹೂಡಿಕೆಯಿಂದ 570 ಉದ್ಯೋಗ ಹಾಗೂ ದಾಲ್ಮಿಯಾ(ಭಾರತ್) ಸಂಸ್ಥೆಯ ₹3,020 ಕೋಟಿ ಹೂಡಿಕೆಯಿಂದ 570 ಉದ್ಯೋಗ, ಎಂವೀ ಎನರ್ಜಿ ಸಂಸ್ಥೆಯ ₹5,495 ಕೋಟಿ ಹೂಡಿಕೆಯಿಂದ 2,508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು ₹13,921 ಕೋಟಿ ಹೂಡಿಕೆಯಾಗಲಿದ್ದು, 3,948 ಉದ್ಯೋಗ ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಸಭೆಯ ನಂತರ ಮಾಹಿತಿ ನೀಡಿದರು.

ಸಚಿವರಾದ ಎನ್. ಚಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.