ಬೆಂಗಳೂರು: ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲ್ಲೂಕು ನ್ಯಾಯಾಲಯಗಳ 369 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಗುರುವಾರ ಆದೇಶಿಸಲಾಗಿದೆ.

ಸಂತೋಷ ಗಜಾನನ ಭಟ್ ಅವರನ್ನು ‘ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ’ದ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅಕ್ರಮವಾಗಿ ಅದಿರು ಸಾಗಣೆ ಮಾಡಿದ ಆರೋಪ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ದೇಶದಾದ್ಯಂತ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆ ವಿಧಿಸುವ ಮೂಲಕ ದೇಶದ ಗಮನ ಸೆಳೆಯುವ ತೀರ್ಪುಗಳನ್ನು ಅವರು ನೀಡಿದ್ದರು.

ಸಂತೋಷ ಗಜಾನನ ಭಟ್ ಅವರಿಂದ ತೆರವಾಗುತ್ತಿರುವ ಸ್ಥಾನಕ್ಕೆ ಮಂಡ್ಯ ಜಿಲ್ಲಾ 1ನೇ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿರುವ ಕೆ.ಬಿ.ಶಿವಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

ಅಂತೆಯೇ, ಹೈಕೋರ್ಟ್ನ ಹಾಲಿ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ಕುಮಾರ್ ಅವರನ್ನು ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಪ್ರಧಾನ ನ್ಯಾಯಾಧೀಶರನ್ನಾಗಿ ನಿಯೋಜಿಸಲಾಗಿದೆ.

ಪ್ರತಿ ವರ್ಷ ಬೇಸಿಗೆ ರಜೆಗೂ ಮುನ್ನ ನಡೆಯುವ ಅಧೀನ ನ್ಯಾಯಾಲಯಗಳ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವರ್ಗಾವಣೆ ನಡೆದಿದ್ದು, ವರ್ಗಾವಣೆ ಆದವರಲ್ಲಿ 115 ಜಿಲ್ಲಾ ನ್ಯಾಯಾಧೀಶರು, 115 ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು 139 ಸಿವಿಲ್ ನ್ಯಾಯಾಧೀಶರು ಇದ್ದಾರೆ. ಈ ವರ್ಗಾವಣೆ ಆದೇಶ ಜೂನ್ 1ರಿಂದ ಅನ್ವಯವಾಗಲಿದ್ದು, ಹೆಚ್ಚಿನ ವಿವರಗಳಿಗೆ ಹೈಕೋರ್ಟ್ನ ಅಧಿಕೃತ ವೆಬ್ಸೈಟ್ ಪರಿಶೀಲಿಸಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.