ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರದಿಂದ ಮೂರು ದಿನ ವಿಧಾನಸಭೆ ಅಧಿವೇಶನ: ಸಿದ್ದರಾಮಯ್ಯ

ಜುಲೈ ತಿಂಗಳಿನಲ್ಲಿ ಬಜೆಟ್ ಮಂಡನೆ
Published 20 ಮೇ 2023, 11:28 IST
Last Updated 20 ಮೇ 2023, 11:28 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕಾಗಿ ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅತ್ಯಂತ ಹಿರಿಯ ಶಾಸಕರಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಅಧ್ಯಕ್ಷರಾಗಿ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುವಂತೆ ಮನವಿ ಮಾಡಲಾಗುವುದು. ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ ಎಂದರು.

ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT