ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಚುನಾವಣೆ: 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

2 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಇಂದು ಪ್ರಕಟಿಸಿದೆ
Published 29 ಅಕ್ಟೋಬರ್ 2023, 5:17 IST
Last Updated 29 ಅಕ್ಟೋಬರ್ 2023, 5:17 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು: ವಿಧಾನ ಪರಿಷತ್‌ಗೆ ಎರಡು ಪದವೀಧರರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಂದ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಭಾನುವಾರ ಪ್ರಕಟಿಸಿದೆ. 2024ರ ಮೇ ಅಥವಾ ಜೂನ್‌ ತಿಂಗಳಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ. ಶ್ರೀನಿವಾಸ್ ಹಾಗೂ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಪಾಟೀಲ ಅವರನ್ನು ಕಣಕ್ಕಿಳಿಸಲು ಎಐಸಿಸಿ ನಿರ್ಧರಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಐವರು ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಿ.ಪಾಟೀಲ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣ ಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರ ಅವಧಿ 2024ರ ಜೂನ್ 21ಕ್ಕೆ ಕೊನೆ ಆಗಲಿದೆ.

ನೈರುತ್ಯ ಪದವೀಧರ ಕ್ಷೇತ್ರದ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ಏಪ್ರಿಲ್ 19ರಿಂದ ತೆರವಾಗಿದೆ. ಈ ಸ್ಥಾನದ ಅವಧಿ 2024ರ ಜೂನ್‌ 21ರವರೆಗೆ ಇದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಸದಸ್ಯರಾಗಿದ್ದ ಪುಟ್ಟಣ್ಣ ಮಾರ್ಚ್‌16ರಂದು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನದ ಅವಧಿ 2026ರ ನ. 11ರವರೆಗೆ ಇದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಪುಟ್ಟಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಲೇ ಪುಟ್ಟಣ್ಣ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸುತ್ತಿದೆ.

ಇತ್ತೀಚೆಗೆ ಬಿಜೆಪಿ ತ್ಯಜಿಸಿ ‘ಕೈ’ ಹಿಡಿದಿರುವ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಜೊತೆ ಕಾಂಗ್ರೆಸ್ ಸೇರ್ಪಡೆಯಾಗಿರುವ ಅವರ ಪತಿ ಡಿ.ಟಿ. ಶ್ರೀನಿವಾಸ್ ​ಅವರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಡಿ.ಟಿ. ಶ್ರೀನಿವಾಸ್ ಕಳೆದ ಬಾರಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಈ ಶಿಕ್ಷಕರ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ರಾಮೋಜಿ ಗೌಡ

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್

ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್

ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ ಪಾಟೀಲ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT