ಬೆಂಗಳೂರು:ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕವಯತ್ರಿ ಎಚ್.ಎಲ್. ಪುಷ್ಪಾ ಜಯಶೀಲರಾಗಿದ್ದಾರೆ.

ಬೆಂಗಳೂರಿನಎನ್.ಆರ್. ಕಾಲೊನಿಯಲ್ಲಿರುವ ಬಿ.ಎಂ.ಶ್ರೀ. ಪ್ರತಿಷ್ಠಾನದಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹಾಲಿ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್ ಹಾಗೂ ಪುಷ್ಪಾ ಅವರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ 62 ಮತಗಳ ಅಂತರದಿಂದ ಪುಷ್ಪಾ ವಿಜೇತರಾಗಿ ಹೊರಹೊಮ್ಮಿದರು.

ಎಚ್.ಎಲ್. ಪುಷ್ಪಾ 342, ವನಮಾಲಾ ಸಂಪನ್ನಕುಮಾರ್ 280 ಹಾಗೂ ಶೈಲಜಾ ಸುರೇಶ್ 33 ಮತಗಳನ್ನು ಪಡೆದಿದ್ದಾರೆ.

ಸಂಘದ 1,330 ಸದಸ್ಯರಲ್ಲಿ 1,295 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ಜಿಲ್ಲೆಗಳಲ್ಲಿ ಸದಸ್ಯರು ಅಂಚೆಗಳ ಮೂಲಕ ಮತ ಚಲಾಯಿಸಿದ್ದರು. ಬೆಂಗಳೂರಿನಲ್ಲಿ 650 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ರಾಜ್ಯದ ಎಲ್ಲೆಡೆಯಿಂದ 699 ಮತಗಳು ಚಲಾವಣೆಯಾಗಿದ್ದವು. 44 ಮತಗಳು ತಿರಸ್ಕರಿಸಲ್ಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.