ಬೆಂಗಳೂರು: ದಿನಸಿ ಮತ್ತು ಎಪಿಎಂಸಿ ಮಾರುಕಟ್ಟೆಯನ್ನು ಬೆಳಿಗ್ಗೆ 6 ಗಂಟೆಯಿಂದ 12ರವರೆಗೆ ತೆರೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇ 2ರ ಭಾನುವಾರದಿಂದ ಅನ್ವಯವಾಗುವಂತೆ ಈ ಪರಿಷ್ಕೃತ ಆದೇಶ ಜಾರಿಯಲ್ಲಿರಲಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಖರೀದಿ ವೇಳೆ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣಿ ತಪ್ಪಿಸಲು ಈ ಉಪಕ್ರಮ ಕೈಗೊಳ್ಳಲಾಗಿದೆ. ವಾರದ ಸಂತೆ ಸೇರಿದಂತೆ ಎಲ್ಲ ರೀತಿಯ ಸಂತೆಗಳನ್ನೂ ನಿರ್ಬಂಧಿಸಲಾಗಿದೆ. ಅದರ ಬದಲಿಗೆ ಹಾಪ್‌ಕಾಮ್ಸ್, ಹಾಲಿನ ಬೂತ್‌ಗಳು, ತಳ್ಳುಗಾಡಿಗಳ ಮೂಲಕ ತರಕಾರಿ, ಹಣ್ಣು ಮಾರಾಟಮಾಡುವವರು ಹಾಗೂ ದುಬಾರಿ ಬೆಲೆಗೆ ಮಾರದೇ ಮಾರುಕಟ್ಟೆ ದರದಲ್ಲಿ ವ್ಯಾಪಾರ ಮಾಡುವವರಿಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ಅವಕಾಶ ನೀಡಲಾಗಿದೆ.

ಬಿಬಿಎಂಪಿ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಆದೇಶವನ್ನು ಜಾರಿ ಮಾಡಲು ಅವರು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.