ಬೆಂಗಳೂರು: ‘ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸಾಮಾನ್ಯ ಜನರ ಹಕ್ಕುಗಳ ರಕ್ಷಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ದೇಶಕ್ಕೇ ಮಾದರಿ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದರು.

ಲೋಕಾಯುಕ್ತ ಸಂಸ್ಥೆಯು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಕರ್ನಾಟಕ ಲೋಕಾಯುಕ್ತದ 4 ದಶಕಗಳ ಪಯಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರದ ಸೇವೆ ಮತ್ತು ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ, ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಲೋಕಾಯುಕ್ತವು ಮಹತ್ವದ ಪಾತ್ರವಹಿಸಿದೆ. ಸಂಸ್ಥೆಯು 40 ವರ್ಷಗಳಿಂದಲೂ ಈ ಕೆಲಸವನ್ನು ಮಾಡಿಕೊಂಡು ಬರುತ್ತಿದೆ’ ಎಂದರು.

‘ಕಬ್ಬಿಣದ ಅದಿರು ಸೇರಿ ಖನಿಜ ಸಂಪನ್ಮೂಲಗಳ ಗಣಿಗಾರಿಕೆಯಲ್ಲಿನ ಅಕ್ರಮಗಳನ್ನು ಹೊರಗೆಡವಿದ್ದು ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು. ಜನರೇ ಭ್ರಷ್ಟಾಚಾರವನ್ನು ತಿರಸ್ಕರಿಸುವಂತಹ ವಾತಾವರಣ ನಿರ್ಮಿಸಿದ ಈ ಸಂಸ್ಥೆಯ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ‘ಭ್ರಷ್ಟಾಚಾರದ ವಿರುದ್ಧ ಹೋರಾಡಲು ದೇಶದಲ್ಲೇ ಮೊದಲ ಬಾರಿಗೆ ಲೋಕಾಯುಕ್ತವನ್ನು ಆರಂಭಿಸಿದ ಹೆಗ್ಗಳಿಕೆ ಕರ್ನಾಟಕಕ್ಕೆ ಸಲ್ಲುತ್ತದೆ. ಭ್ರಷ್ಟಾಚಾರ ಒಂದು ಸಾಮಾಜಿಕ ಪಿಡುಗು ಮತ್ತು ಅದರ ವಿರುದ್ಧ ಹೋರಾಡಬೇಕು ಎಂಬ ಮನಸ್ಥಿತಿಯನ್ನು ಜನರಲ್ಲಿ ಮೂಡಿಸುವಲ್ಲಿ ಈ ಸಂಸ್ಥೆ ದುಡಿದಿದೆ’ ಎಂದರು.

‘ಭ್ರಷ್ಟಾಚಾರ ಮತ್ತು ಅಪರಾಧದ ಸ್ವರೂಪದ ಪ್ರತಿದಿನವೂ ಬದಲಾಗುತ್ತಿದೆ. ಸೈಬರ್ ಅಪರಾಧ/ಭ್ರಷ್ಟಾಚಾರ, ಡಿಜಿಟಲ್ ತಿರುಚುವಿಕೆ ಈಗ ದೊಡ್ಡ ಪಿಡುಗುಗಳಾಗಿವೆ. ಅವುಗಳನ್ನೂ ನಿರ್ವಹಣೆ ಮಾಡುವಂತಹ ಅತ್ಯಾಧುನಿಕ ತಂತ್ರಜ್ಞಾನ, ವಿಧಿವಿಜ್ಞಾನ ಪರೀಕ್ಷೆಗಳಂತಹ ಸವಲತ್ತುಗಳನ್ನು ಕರ್ನಾಟಕ ಲೋಕಾಯುಕ್ತವು ಹೊಂದಬೇಕು’ ಎಂದು ಸಲಹೆ ನೀಡಿದರು.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ, ‘ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ತರುವುದು ಮತ್ತು ಆಡಳಿತ ಯಂತ್ರದಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವುದೇ ಲೋಕಾಯುಕ್ತದ ಮೂಲ ಉದ್ದೇಶ’ ಎಂದರು.

‘ದಿಢೀರ್ ದಾಳಿಗಳು ಮತ್ತು ದೂರುಗಳ ಆಧಾರದಲ್ಲಿ ತನಿಖೆ ಮಾತ್ರವಲ್ಲದೆ, ಜಿಲ್ಲಾ ಪ್ರವಾಸ ಹಾಗೂ ಲೋಕ ಅದಾಲತ್ಗಳನ್ನು ನಡೆಸುತ್ತಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದೇವೆ. ಸರ್ಕಾರದ ಸೌಲಭ್ಯಗಳು ಅರ್ಹರನ್ನು ತಲುಪದೇ ಇದ್ದ ಅಥವಾ ವಿಳಂಬವಾದ ಸಂದರ್ಭದಲ್ಲಿ ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಈ ವ್ಯವಸ್ಥೆ ಮೇಲೆ ಜನರಿಗೆ ನಂಬಿಕೆ ಮೂಡಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.