ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ವೆಂಕಟೇಶ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು, ಆರೋಪಿತ ಅಧಿಕಾರಿಯ ಮನೆ, ಅವರಿಗೆ ಸಂಬಂಧಿಸಿದ ಕೆಲವು ಸ್ಥಳಗಳು ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.