ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆ ವಿರೋಧಿಸಿ ಇದೇ 18 ರಂದು ಸಭೆ: ಆರಗ ಜ್ಞಾನೇಂದ್ರ

Last Updated 13 ಜುಲೈ 2022, 10:44 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶವನ್ನು ಗುರುತಿಸಿ ಹೊಸದಾಗಿ ಹೊರಡಿಸಿರುವ ಅಧಿಸೂಚನೆ, ಇಲ್ಲಿನ ಜನರ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ದೂರಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಬಗ್ಗೆ ಚರ್ಚಿಸಲು ಇದೇ 18 ರಂದು ಮಲೆನಾಡು ಪ್ರದೇಶದ ಶಾಸಕರ ಸಭೆಯೊಂದನ್ನು ಕರೆದಿದ್ದಾರೆ.

ಕಳೆದ ವಾರ ಪರಿಸರ ಮತ್ತು ಅರಣ್ಯ ಸಚಿವಾಲಯ ಕರ್ನಾಟಕವೂ ಸೇರಿ ಒಟ್ಟು 56,823 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದೆ. ಆಕ್ಷೇಪಣೆ ಸಲ್ಲಿಸಲು ಎರಡು ತಿಂಗಳ ಗಡುವನ್ನೂ ನೀಡಿದೆ. ಒಂದು ವೇಳೆ ಈ ಅಧಿಸೂಚನೆ ಅನುಷ್ಠಾನಗೊಂಡರೆ ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ. ಅಭಿವೃದ್ಧಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗಬೇಕಾಗುತ್ತದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಈ ಹಿಂದೆ ಡಾ.ಕಸ್ತೂರಿರಂಗನ್‌ ಸಮಿತಿ ವರದಿಯನ್ನು ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯವನ್ನೂ ತಿಳಿಸಿದೆ. ಸರ್ಕಾರ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬುದು ಈ ಭಾಗದ ಶಾಸಕರ ಆಗ್ರಹವಾಗಿದೆ. ಸೋಮವಾರದ ಸಭೆಯಲ್ಲಿ ಅಧಿಸೂಚನೆಯನ್ನು ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT