ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗನವಾಡಿಯಲ್ಲೇ ಎಲ್‌ಕೆಜಿ: ಅನುದಾನಕ್ಕೆ ಲಕ್ಷ್ಮಿ ಹೆಬ್ಬಾಳಕರ ಮೊರೆ

Published 1 ಜುಲೈ 2024, 21:41 IST
Last Updated 1 ಜುಲೈ 2024, 21:41 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಇಲಾಖೆ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು.

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ನೀಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಾಕಿ ಇರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಅಂಗನವಾಡಿಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಅನುದಾನದ ಅಗತ್ಯವಿದೆ. ಜರೂರಾಗಿ ಅನುದಾನ ಬಿಡುಗಡೆ ಮಾಡಬೇಕು. ಪ್ರಮುಖವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜಿಸಿರುವ ತಾಲ್ಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳನ್ನು ಕೂಡಲೇ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT