ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಲ್ಪಸಂಖ್ಯಾತರಿಗೆ ₹72.78 ಕೋಟಿ ಶಿಕ್ಷಣ ಸಾಲ: ಜಮೀರ್‌

Published 11 ಜೂನ್ 2024, 15:49 IST
Last Updated 11 ಜೂನ್ 2024, 15:49 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಶಿಕ್ಷಣದ ವ್ಯಾಸಂಗಕ್ಕಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ₹72.78 ಕೋಟಿ ಶಿಕ್ಷಣ ಸಾಲ ನೀಡಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತರ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಗರಿಷ್ಠ ₹5 ಲಕ್ಷ, ವಿದೇಶದಲ್ಲಿ ವ್ಯಾಸಂಗ ಮಾಡಲು 88 ವಿದ್ಯಾರ್ಥಿಗಳಿಗೆ ಗರಿಷ್ಠ ₹10 ಲಕ್ಷ ನೀಡಲಾಗುತ್ತದೆ ಎಂದರು.

ಇದೇ ಮೊದಲ ಬಾರಿಗೆ ಸಣ್ಣ ವ್ಯಾಪಾರ ಮಾಡುವ 961 ಮಹಿಳೆಯರಿಗೆ ₹4.8 ಕೋಟಿ ಸಾಲ ನೀಡಲಾಗಿದೆ. ಶೇ 50ರಷ್ಟು ಸಹಾಯಧನ, ಉಳಿದ ಶೇ  50 ರಷ್ಟು ಸಾಲದ ರೂಪದಲ್ಲಿ ನೀಡಲಾಗಿದೆ. ವೃತ್ತಿ ಪ್ರೋತ್ಸಾಹ ಯೋಜನೆಯಡಿ 973 ಜನರಿಗೆ ₹9.73 ಕೋಟಿ, ಶ್ರಮ ಶಕ್ತಿ ಯೋಜನೆಯಡಿ ಒಂದು ಸಾವಿರ ಜನರಿಗೆ ₹5 ಕೋಟಿ ಸಾಲ ಒದಗಿಸಲಾಗಿದೆ ಎಂದು ವಿವರಿಸಿದರು.

ಈ ವರ್ಷ 666 ಕಾರು ಹಾಗೂ 500 ಆಟೊ ಫಲಾನುಭವಿಗಳಿಗೆ ₹23.75 ಕೋಟಿ ನೆರವು ನೀಡಲಾಗುವುದು, ಈ ವರ್ಷ ₹200.60 ಕೋಟಿ ಸಾಲ ವಸೂಲಾತಿ ಮಾಡಿದ್ದು, ಕಳೆದ ವರ್ಷಕ್ಕಿಂತ 50 ಲಕ್ಷ ಹೆಚ್ಚು ವಸೂಲಾತಿಯಾಗಿದೆ ಎಂದರು.

ಕೆಎಂಡಿಸಿ ಅಧ್ಯಕ್ಷ ಬಿ.ಕೆ. ಅಲ್ತಾಫ್‌ ಖಾನ್‌, ವ್ಯವಸ್ಥಾಪಕ ನಿರ್ದೇಶಕ ಮೊಹಮದ್‌ ನಜೀರ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT