ಕೆ.ವೈ.ನಂಜೇಗೌಡ (ಕಾಂಗ್ರೆಸ್)

ಮಾಲೂರು: ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಗೆದ್ದಿರುವ ಇವರ ಆಯ್ಕೆಯನ್ನು ಹೈಕೋರ್ಟ್ 2025ರ ಸೆಪ್ಟೆಂಬರ್ನಲ್ಲಿ ರದ್ದುಪಡಿಸಿತ್ತು. ‘ಮತ ಎಣಿಕೆ ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿಲ್ಲ. ಅಕ್ರಮ ಎಸಗಲಾಗಿದೆ’ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಬಿಜೆಪಿಯ ಕೆ.ಎಸ್.ಮಂಜುನಾಥ್ ಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಸಿ.ಕೆ.ರಾಮಮೂರ್ತಿ (ಬಿಜೆಪಿ)

ಜಯನಗರ: 2023ರ ಚುನಾವಣೆಯ 827 ಅಂಚೆ ಮತಗಳನ್ನು (ಪೋಸ್ಟಲ್ ಬ್ಯಾಲೆಟ್) ಮರು ಎಣಿಕೆ ಮಾಡುವಂತೆ ಕೋರಿ ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ. ವಿಚಾರಣೆ ಆರಂಭವಾಗಿದೆ.

ಸತೀಶ್ ಸೈಲ್ (ಕಾಂಗ್ರೆಸ್)

ಕಾರವಾರ: ಸಾವಿರಾರು ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಕಳ್ಳತನ ಮಾಡಿ, ವಿದೇಶಗಳಿಗೆ ಅಕ್ರಮವಾಗಿ ಸಾಗಣೆ ಮಾಡುವ ಮೂಲಕ ರಾಜ್ಯದ ಖಜಾನೆಗೆ ₹200 ಕೋಟಿಗೂ ಹೆಚ್ಚಿನ ಮೊತ್ತದ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಳು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಇದೇ ಪ್ರಕರಣದಲ್ಲಿನ ಎಲ್ಲ ಏಳು ಅಪರಾಧಿಗಳಿಗೆ ಒಟ್ಟು ₹44 ಕೋಟಿಗೂ ಹೆಚ್ಚು ದಂಡ ವಿಧಿಸಿತ್ತು. ವೈದ್ಯಕೀಯ ಜಾಮೀನಿನ ಮೇಲಿದ್ದಾರೆ.

ಕೆ.ಸಿ.ವೀರೇಂದ್ರ (ಕಾಂಗ್ರೆಸ್)

ಚಿತ್ರದುರ್ಗ: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದು, ಸದ್ಯ ಜಾಮೀನಿನ ಮೇಲಿದ್ದಾರೆ.

ವಿನಯ ಕುಲಕರ್ಣಿ (ಕಾಂಗ್ರೆಸ್)

ಧಾರವಾಡ : ಜಿಲ್ಲಾಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿ.
ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಿ. ಜನಾರ್ದನ ರೆಡ್ಡಿ (ಬಿಜೆಪಿ ಸಹ ಸದಸ್ಯ)

ಗಂಗಾವತಿ: ಅಕ್ರಮ ಗಣಿಗಾರಿಕೆಯ ಹಲವು ಪ್ರಕರಣಗಳಲ್ಲಿ ಆಪಾದಿತರಾಗಿದ್ದು, ಸದ್ಯ ಜಾಮೀನಿನ ಹೊರಗಿದ್ದಾರೆ.

ಬೈರತಿ ಬಸವರಾಜ (ಬಿಜೆಪಿ)

ಕೆ.ಆರ್. ಪುರ: ರೌಡಿ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿ ಆಗಿರುವ ಅವರನ್ನು ಸಿಐಡಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಎಸ್.ಎನ್. ಸುಬ್ಬಾರೆಡ್ಡಿ (ಕಾಂಗ್ರೆಸ್)

ಚಿಕ್ಕಬಳ್ಳಾಪುರ: ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ‘ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧು ಗೊಳಿಸಬೇಕು ಮತ್ತು ನನ್ನನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು’ ಎಂದು ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಈ ಮಹತ್ವದ ಆದೇಶ ನೀಡಿದೆ.