ಬೆಂಗಳೂರು: ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಟಿಕೆಟ್ ಕೈತಪ್ಪಿರುವ ಬೆನ್ನಲ್ಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೌಜನ್ಯದಿಂದ ವರ್ತಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸಂಘದ ಶಿಸ್ತು, ಪಕ್ಷದ ಸಂಘಟನೆ, ಜನಪರ ಹೋರಾಟ ಹಾಗೂ ಸೇವೆಯನ್ನು ನಿಜ ಕಾಯಕವೆಂದು ತಿಳಿದು ಬದುಕಿನ ಹೆಜ್ಜೆಯಿಟ್ಟವರು ತಂದೆ ಯಡಿಯೂರಪ್ಪನವರು. ಈ ಕಾರಣಕ್ಕಾಗಿಯೇ ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಪ್ರಮಾಣವಚನ ಸ್ವೀಕರಿಸುವ ಅವಕಾಶವನ್ನು ಜನರ ಆರ್ಶೀವಾದ ಹಾಗೂ ಭಾರತೀಯ ಜನತಾ ಪಕ್ಷ ಕಲ್ಪಿಸಿದೆ’ ಎಂದು ತಿಳಿಸಿದ್ದಾರೆ.

‘ಅಂತೆಯೇ ಅನಿರೀಕ್ಷಿತ ತಿರುವಿನಲ್ಲಿ ರಾಜಕೀಯ ಪ್ರವೇಶಿಸಿದ ನನಗೆ ರಾಜ್ಯ ಬಿಜೆಪಿಯ ಉಪಧಾಕ್ಷನಾಗಿ ಮಹತ್ವದ ಜವಾಬ್ದಾರಿ ನೀಡಿ ನನ್ನ ಬೆನ್ನುತಟ್ಟಿ ಬೆಳೆಸುತ್ತಿರುವುದು ಪಕ್ಷ ಮತ್ತು ಪಕ್ಷದ ವರಿಷ್ಠರು. ರಾಜಕೀಯ ಅಧಿಕಾರ ನಿಂತ ನೀರಲ್ಲ, ಅದು ಹರಿಯುವ ನದಿಯ ಹಾಗೆ. ಇದನ್ನು ಕಾರ್ಯಕರ್ತರು ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು’ ಎಂದು ವಿನಂತಿಸುತ್ತೇನೆ.

‘ಅನಗತ್ಯ ಟೀಕೆ. ಟಿಪ್ಪಣಿಗಳು, ಉದ್ಘೋಷಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದರೆ ಆದರಿಂದ ನನ್ನ ವ್ಯಕ್ತಿತ್ವಕ್ಕೆ ಹಾಗೂ ತಂದೆಯವರ (ಬಿಎಸ್‌ವೈ) ಭಾವನೆಗಳಿಗೆ ಮಸಿ ಬಳಿದಂತಾಗುವುದೇ ಹೊರತು ನಮ್ಮನ್ನು ಬೆಂಬಲಿಸಿದಂತೆ ಆಗುವುದಿಲ್ಲ ಎನ್ನುವುದನ್ನು ಹಿತೈಷಿ ಎಂದು ಹೇಳಿಕೊಳ್ಳುವ ಪ್ರತಿಯೊಬ್ಬರೂ ಅರಿಯಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

ಓದಿ...ಪರಿಷತ್ ಚುನಾವಣೆ: ಟಿ.ಎ.ಶರವಣ ಜೆಡಿಎಸ್ ಅಭ್ಯರ್ಥಿ

‘ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ನಾವೆಲ್ಲರೂ ಸಾಮಾನ್ಯ ಕಾರ್ಯಕರ್ತರು. ಸಾಮರ್ಥ್ಯ ಇರುವವರನ್ನು ಪಕ್ಷ ಎಂದಿಗೂ ಕೈಬಿಟ್ಟಿಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಹನೆ, ಸೌಜನ್ಯದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ. ನಿಮ್ಮೆಲ್ಲರ ಬೆಂಬಲ, ಸಹಕಾರ ಸದಾ ಇರಲಿ‘ ಎಂದು ವಿನಂತಿಸಿದ್ದಾರೆ.

ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಮಂಗಳವಾರ ಬಿಡುಗಡೆ ಮಾಡಿದೆ. ಪಕ್ಷದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್, ಹೇಮಲತಾ ನಾಯಕ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಶಿಕ್ಷಕರ ಕ್ಷೇತ್ರದಿಂದ ಬಸವರಾಜ ಹೊರಟ್ಟಿ ಅವರನ್ನು ಕಣಕ್ಕಿಳಿಸಲಾಗಿದೆ.

ಓದಿ...ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ವಿಜಯೇಂದ್ರಗೆ ನಿರಾಸೆ

ಓದಿ...ವಿಧಾನಪರಿಷತ್: ಕಾಂಗ್ರೆಸ್ನಿಂದ ನಾಗರಾಜು ಯಾದವ್, ಅಬ್ದುಲ್ ಜಬ್ಬಾರ್ ಕಣಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.