ಬೆಂಗಳೂರು: ರಾಜ್ಯದಲ್ಲಿ ಸಂಚರಿಸುವ ಬಾಡಿಗೆ ವಾಹನಗಳು ಮತ್ತು ಇತರ ವಾಹನಗಳ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಮಸೂದೆ’ಗೆ ವಿಧಾನಸಭೆ ಬುಧವಾರ ಅಂಗೀಕಾರ ನೀಡಿತು.

ಈ ಮಸೂದೆಯನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪರ ಕಾನೂನು ಸಚಿವ ಎಚ್.ಕೆ. ಪಾಟೀಲ ಮಂಡಿಸಿದರು.

‘ತೆರಿಗೆ ಕಡಿಮೆ ಎಂಬ ಕಾರಣಕ್ಕೆ ಅನ್ಯರಾಜ್ಯಗಳಲ್ಲಿ ವಾಹನಗಳ ನೋಂದಣಿಯಾಗುತ್ತಿದೆ. ಅದನ್ನು ತಪ್ಪಿಸಿ ರಾಜ್ಯದಲ್ಲಿಯೇ ನೋಂದಣಿಗೆ ಪ್ರೋತ್ಸಾಹ ನೀಡಲು, ವಾಣಿಜ್ಯ ಉದ್ದೇಶದ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಟ್ರೇಲರ್ಗಳ ನೋಂದಣಿ, ಜೀವಿತಾವಧಿ ತೆರಿಗೆ ಪರಿಷ್ಕರಿಸಲು ಹಾಗೂ ಕಾರು, ಜೀಪು, ಓಮ್ನಿ ಸೇರಿದಂತೆ ಖಾಸಗಿ ಸೇವಾ ವಾಹನಗಳ ನೋಂದಣಿ ತೆರಿಗೆ ಪರಿಷ್ಕರಣೆಗೆ ಈ ತಿದ್ದುಪಡಿಯಿಂದ ಅವಕಾಶ ಆಗಲಿದೆ. ಆ ಮೂಲಕ, ರಾಜ್ಯಕ್ಕೆ ಸಂಪನ್ಮೂಲ ಕ್ರೋಡಿಕರಿಸಲು ಸಾಧ್ಯವಾಗಲಿದೆ’ ಎಂದು ಎಚ್.ಕೆ. ಪಾಟೀಲ ವಿವರಿಸಿದರು.

ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ನೀಡಿದ ಉತ್ತರ ತೃಪ್ತಿಕರ ಆಗಿಲ್ಲವೆಂದು ಆರೋಪಿಸಿ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದ ವೇಳೆಯಲ್ಲಿ ಈ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.