ಸುರತ್ಕಲ್: ಯುವಕ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದೆ. ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು. ಯಾರು ಕೂಡ ವದಂತಿಗಳಿಗೆ ಕಿವಿಗೊಡಬಾರದು. ಫಾಝಿಲ್ ಮನೆಯವರಿಂದಲೂ ಮಾಹಿತಿ ಪಡೆಯಲಾಗಿದೆ. ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು.

ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ನಡೆಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಗಡಿಭಾಗದಲ್ಲಿ ವಾಹನಗಳನ್ನ ಚೆಕ್ ಮಾಡಲಾಗುತ್ತಿದ್ದು, ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಅಲೋಕ್ ಕುಮಾರ್ ಹೇಳಿದರು.

ಇವನ್ನೂ ಓದಿ
*ಬೆಳ್ಳಾರೆ: ಬಿಜೆಪಿ ಮುಖಂಡನ ಕೊಲೆ
*ಸುರತ್ಕಲ್: ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್ ಎಂಬ ಯುವಕನ ಬರ್ಬರ ಹತ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.