ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ನೀಡುವ 2024–25ನೇ ಸಾಲಿನ 'ಕರ್ನಾಟಕ ಕಲಾಶ್ರೀ ಪ್ರಶಸ್ತಿ’ಯನ್ನು ಪ್ರಕಟಿಸಿದ್ದು, ಬೆಂಗಳೂರಿನ ಹಿರಿಯ ಗಾಯಕಿ ಭಾನುಮತಿ ನರಸಿಂಹನ್ ಹಾಗೂ ಹಾಸನದ ನೃತ್ಯ ಶಿಕ್ಷಕಿ ಗಾಯತ್ರಿ ಕೇಶವನ್ ಅವರಿಗೆ ಗೌರವ ಪ್ರಶಸ್ತಿ ಲಭಿಸಿದೆ.
ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಶುಭ ಧನಂಜಯ ನೇತೃತ್ವದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ 2024–25ನೇ ಸಾಲಿನ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯು ಪ್ರಕಟಣೆಯಲ್ಲಿ ತಿಳಿಸಿದೆ.
ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದವರ ವಿವರ ಇಲ್ಲಿದೆ