ಇನ್ನೂ ಎರಡು ವರ್ಷ ಬೇಕಿದೆ: ರಾಮಲಿಂಗಾರೆಡ್ಡಿ
‘ನಾನು ಮುಜರಾಯಿ ಸಚಿವನಾದ ಬಳಿಕ ದೇವಸ್ಥಾನಗಳ ಆಸ್ತಿಗಳ ದಾಖಲೆ ಮಾಹಿತಿ ಪರಿಶೀಲಿಸಿದ್ದೆ. ನಿರ್ವಹಣೆ ಸಮರ್ಪಕವಾಗಿಲ್ಲ ಎಂಬುದು ಗಮನಕ್ಕೆ
ಬರುತ್ತಿದ್ದಂತೆಯೇ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಪಹಣಿ ಇಂಡೀಕರಣ ಪ್ರಕ್ರಿಯೆ ಆರಂಭಿಸಲು ಸೂಚಿಸಿದ್ದೆ. ಪರಿಣಾಮ ಎರಡು ವರ್ಷಗಳಲ್ಲಿ 11,499 ಎಕರೆ ವಿಸ್ತೀರ್ಣದ ಆಸ್ತಿಗಳ ದಾಖಲೆಗಳನ್ನು ಸರಿಪಡಿಸಲಾಗಿದೆ’ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
‘ಪ್ರತಿ ತಿಂಗಳೂ ಮುಜರಾಯಿ ಆಸ್ತಿಗಳ ಭೂಮಾಪನ, ದಾಖಲೆ ಪರಿಶೀಲನೆ, ತಿದ್ದುಪಡಿ, ಇಂಡೀಕರಣಕ್ಕೆ ಗುರಿ ನಿಗದಿಪಡಿಸಲಾಗಿದೆ. ಎಲ್ಲ ದೇವಾಲಯಗಳ ಆಸ್ತಿಗಳ ದಾಖಲೆಗಳನ್ನು ಸರಿಪಡಿಸಿ, ದೇವಸ್ಥಾನಗಳ ಹೆಸರಿಗೆ ಸರಿಯಾದ ಕ್ರಮದಲ್ಲಿ ದಾಖಲಿಸಲು ಇನ್ನೂ ಎರಡು ವರ್ಷ ಬೇಕಾಗುತ್ತದೆ’ ಎಂದರು.