ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ-ಐಜಿಪಿ) ಐಪಿಎಸ್ ಅಧಿಕಾರಿ ಎಂ.ಎ. ಸಲೀಂ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.

ಸಿಐಡಿಯ ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕ ವಿಭಾಗದ ಪೊಲೀಸ್ ನಿರ್ದೇಶಕರಾಗಿದ್ದ ಸಲೀಂ ಅವರನ್ನು ಸರ್ಕಾರ ಮೇ 21ರಂದು ಪ್ರಭಾರ ಡಿಜಿ-ಐಜಿಪಿ ಆಗಿ ನೇಮಕ ಮಾಡಿತ್ತು. ನಿವೃತ್ತ ಡಿಜಿ–ಐಜಿಪಿ ಅಲೋಕ್ ಮೋಹನ್ ಅವರಿಂದ 43ನೇ ಡಿಜಿಪಿಯಾಗಿ ಸಲೀಂ ಅಧಿಕಾರ ಸ್ವೀಕರಿಸಿದ್ದರು.

ಸಲೀಂ ಅವರನ್ನು ಪ್ರಭಾರ ಡಿಜಿ-ಐಜಿಪಿ ಆಗಿ ನೇಮಕ ಮಾಡಿ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು ಎಂದು ಕೋರಿ ವಕೀಲೆ ಸುಧಾ ಕಾಟ್ವ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 28ರಂದು ಈ ಅರ್ಜಿಯ ವಿಚಾರಣೆಯ ವೇಳೆ, ‘ಯುಪಿಎಸ್ಸಿಯ ಉನ್ನತಮಟ್ಟದ ಸಮಿತಿಗೆ ಡಿಜಿ-ಐಜಿಪಿ ನೇಮಕ ಮಾಡುವ ಸಂಬಂಧ ನಿರ್ದಿಷ್ಟ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಅಲ್ಲಿಂದ ವರದಿ ಬಂದ ಬಳಿಕ ಕ್ರಮ ವಹಿಸಲಾಗುವುದು’ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ತಿಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.