ಬೀದರ್: ‘ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ ಎಂಬ ಬಿಜೆಪಿಯ ಆರೋಪದಲ್ಲಿ ಯಾವುದೇ ಹುರುಳಿಲ್ಲ. ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ₹2,025 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆ ಜಾರಿಗೊಳಿಸಿದರೆ ಕರ್ನಾಟಕ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದರು. ಆದರೆ, ಹಿಂದಿನ ವರ್ಷ ಗ್ಯಾರಂಟಿ ಯೋಜನೆಗಳಿಗೆ ₹52 ಸಾವಿರ ಕೋಟಿ, ಈ ಸಾಲಿನಲ್ಲಿ ₹50 ಸಾವಿರ ಕೋಟಿ ಅನುದಾನ ಕೊಟ್ಟಿದ್ದೇವೆ. ಇದರೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ಕೊಡಲಾಗುತ್ತಿದೆ. ಒಂದುವೇಳೆ ಆರ್ಥಿಕವಾಗಿ ರಾಜ್ಯ ದಿವಾಳಿಯಾಗಿದ್ದರೆ ಬೀದರ್ ಜಿಲ್ಲೆಯಲ್ಲಿ ₹2 ಸಾವಿರ ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡಲು ಆಗುತ್ತಿತ್ತಾ? ಬಿಜೆಪಿಯ ಆರ್.ಅಶೋಕ, ಬಿ.ವೈ.ವಿಜಯೇಂದ್ರ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ಬೀದರ್ಗೆ ಬಂದು ನೋಡಬೇಕು ಎಂದು ತಿಳಿಸಿದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮನೆ ದೇವರು ಸುಳ್ಳು. ಇಡೀ ರಾಜ್ಯದ ಜನರಿಗೆ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಇತ್ತೀಚೆಗೆ ನಡೆದ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಾಜಿಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಅವರ ಮಕ್ಕಳು ಸೋತಿದ್ದಾರೆ. ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ. ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ಈ ಕಾರಣದಿಂದಲೇ ಬೀದರ್ ಜನ ಲೋಕಸಭೆ ಚುನಾವಣೆಯಲ್ಲಿ ಸಾಗರ್ ಖಂಡ್ರೆಯವರನ್ನು ಗೆಲ್ಲಿಸಿದ್ದಾರೆ ಎಂದು ಹೇಳಿದಾಗ ಕರತಾಡನ ಮುಗಿಲು ಮುಟ್ಟಿತ್ತು.

ಬಿಜೆಪಿಯವರು ಇಡೀ ರಾಜ್ಯದಲ್ಲಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ. ಬೆಲೆ ಏರಿಕೆಯ ಕಾರಣ ಕೊಟ್ಟಿದ್ದಾರೆ. ಬಿಜೆಪಿಯವರಿಗೆ ಮಾನ, ಮರ್ಯಾದೆ ಕಿಂಚಿತ್ತೂ ಇಲ್ಲ. ಜನಪರವಾದ ಕಾಳಜಿಯಿದ್ದರೆ ಸುಳ್ಳು ನಾಟಕ ನಿಲ್ಲಿಸಬೇಕು. ದೇಶದಲ್ಲಿ ಬೆಲೆ ಏರಿಕೆಗೆ ಕೇಂದ್ರದ ಬಿಜೆಪಿ ಸರ್ಕಾರ ಕಾರಣ ಎಂದು ಟೀಕಿಸಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿ ಇದ್ದಾಗ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹73, ಡೀಸೆಲ್ ₹46.50, ಸಿಲಿಂಡರ್ ಬೆಲೆ ₹423 ಇತ್ತು. ಆಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲ ದರ ₹120 ಡಾಲರ್ಗೂ ಅಧಿಕವಿತ್ತು. ಈಗ ₹65 ಡಾಲರ್ಗೆ ಇಳಿದಿದೆ. ಹೀಗಿದ್ದರೂ ಸಿಲಿಂಡರ್ ಬೆಲೆ ₹1 ಸಾವಿರ, ಪೆಟ್ರೋಲ್ ₹100, ಡೀಸೆಲ್ ₹90ರ ಗಡಿ ದಾಟಿದೆ. ಬಿಜೆಪಿಯವರಿಗೆ ನಾಚಿಕೆ ಆಗುವುದಿಲ್ಲವೇ? ಜನರ ಗಮನ ಬೇರೆಡೆ ಸೆಳೆಯಲು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ. ಬಿಜೆಪಿಯವರು ಲಜ್ಜೆಗೆಟ್ಟವರು ಎಂದು ಹರಿಹಾಯ್ದರು.

ಕಳೆದ ವರ್ಷ ₹3.71 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದೆ. ಈ ಸಲ ₹4 ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡಿಸಿದ್ದೇನೆ. ಬಜೆಟ್ ಗಾತ್ರ ಹೆಚ್ಚಾಗಿದೆ. ಆರ್ಥಿಕವಾಗಿ ಕರ್ನಾಟಕ ದಿವಾಳಿಯಾಗಿದ್ದರೆ ಇದಾಗುತ್ತಿತ್ತೇ? ಕಳೆದ ವರ್ಷ ‘ಕ್ಯಾಪಿಟಲ್ ಎಕ್ಸ್ಪೆಂಡಿಚರ್’ ₹54 ಸಾವಿರ ಕೋಟಿ ಇತ್ತು. ಈ ಸಲ ₹83 ಸಾವಿರ ಕೋಟಿ ಆಗಿದೆ. ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗಿಂತ ಇದು ಹೆಚ್ಚು. ದಿವಾಳಿಯಾದ ಸರ್ಕಾರ ಇದನ್ನು ಮಾಡಲು ಸಾಧ್ಯವೇ? ರಾಜ್ಯದ ಸಾಲ ಜಿಡಿಪಿಯ ಶೇ 25ರಷ್ಟು ಇರಬೇಕು. ಬಜೆಟ್ ಮಂಡಿಸಿದಾಗ ರಾಜ್ಯದ ಹಣಕಾಸು ಪರಿಸ್ಥಿತಿ ಸರಿಯಾಗಿ ಇರಬೇಕಾದರೆ ಆದಾಯ ಚೆನ್ನಾಗಿರಬೇಕು. ಈ ಮಾನದಂಡಗಳ ಒಳಗೆ ರಾಜ್ಯ ಇದೆ ಎಂದು ಸರ್ಕಾರದ ಸಾಧನೆ ವಿವರಿಸಿದರು.

ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ‘ಐದು ಗ್ಯಾರಂಟಿ ಯೋಜನೆಗಳ ಅನುದಾನದ ಜೊತೆಗೆ ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಗೆ ₹700 ಕೋಟಿ ಅನುದಾನ ಬಂದಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ₹2 ಸಾವಿರ ಕೋಟಿ ಅನುದಾನ ನೀಡಲಾಗಿತ್ತು. ಈಗ ನಗರಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಬಿಜೆಪಿ ಸರ್ಕಾರದ ಹೆಸರು ಕೆಡಿಸಲು ಸುಳ್ಳು ಹೇಳುತ್ತಿದೆ. ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದೆ’ ಎಂದು ಕಿಡಿಕಾರಿದರು.

ಸಚಿವರಾದ ಎಂ.ಸಿ. ಸುಧಾಕರ್, ರಾಮಲಿಂಗಾರೆಡ್ಡಿ,ಎನ್.ಎಸ್. ಬೋಸರಾಜು, ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ,

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ್, ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ್ ಖಂಡ್ರೆ, ಉಪಾಧ್ಯಕ್ಷ ಅಭಿಷೇಕ ಪಾಟೀಲ, ಕಾಂಗ್ರೆಸ್ ಮುಖಂಡರಾದ ರಾಜಶೇಖರ ಪಾಟೀಲ ಹುಮನಾಬಾದ್, ವಿಜಯ್ ಸಿಂಗ್, ಧನರಾಜ ತಾಳಂಪಳ್ಳಿ, ಅಶೋಕ್ ಖೇಣಿ, ಅರವಿಂದಕುಮಾರ ಅರಳಿ, ಗುರಮ್ಮ ಸಿದ್ದಾರೆಡ್ಡಿ, ಸಂಜಯ್ ಜಾಹಗೀರದಾರ್ ಮತ್ತಿತರರು ಹಾಜರಿದ್ದರು.

ಬಿಜೆಪಿ ಶಾಸಕರ ಬಹಿಷ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭವನ್ನು ಜಿಲ್ಲೆಯ ಬಿಜೆಪಿಯ ನಾಲ್ವರು ಶಾಸಕರು ಬಹಿಷ್ಕರಿಸಿದರು.

‘ಸಿಎಂ ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ಚಾಲನೆ ಕೊಡುತ್ತಿದ್ದಾರೆ. ಇದರಲ್ಲಿ ಹೊಸತೇನೂ ಇಲ್ಲ. ಬೆಲೆ ಏರಿಕೆ, ಅಲ್ಪಸಂಖ್ಯಾತರ ತುಷ್ಟೀಕರಣದಲ್ಲಿ ರಾಜ್ಯ ಸರ್ಕಾರ ತೊಡಗಿದ್ದು, ಅದನ್ನು ವಿರೋಧಿಸಿ ಸಿಎಂ ಕಾರ್ಯಕ್ರಮದಿಂದ ದೂರ ಉಳಿಯಲು ನಿರ್ಧರಿಸಲಾಗಿದೆ’ ಎಂದು ಬಿಜೆಪಿ ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ, ಶರಣು ಸಲಗರ್, ಪ್ರಭು ಚವಾಣ್ ಮಂಗಳವಾರ ಜಂಟಿ ಪ್ರಕಟಣೆ ಹೊರಡಿಸಿದ್ದರು. ಅದರಂತೆ ಬುಧವಾರ ನಡೆದ ಕಾರ್ಯಕ್ರಮದಿಂದ ಅವರು ದೂರ ಉಳಿದರು.

‘ಎಲ್ಲ ಹೊಸ ಕಾಮಗಾರಿಗಳು’

‘ಹಳೆಯ ಕಾಮಗಾರಿಗಳಿಗೆ ಪುನಃ ಶಂಕುಸ್ಥಾಪನೆ ಮಾಡುತ್ತಿಲ್ಲ. ಎಲ್ಲ ಹೊಸ ಕಾಮಗಾರಿಗಳಿಗೆ ಮಾಡುತ್ತಿದ್ದೇವೆ. 2017ರಲ್ಲಿ ಮುಖ್ಯಮಂತ್ರಿ ಜಿಲ್ಲಾಡಳಿತ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೆ, ನಂತರ ಬಂದ ಬಿಜೆಪಿ ಸರ್ಕಾರ ಏನೂ ಕೆಲಸ ಮಾಡಲಿಲ್ಲ. ಈಗ ನಮ್ಮ ಕೆಲಸಕ್ಕೆ ಅಡ್ಡ ಹಾಕುತ್ತಿದ್ದಾರೆ. ₹48 ಕೋಟಿಯಲ್ಲಿ ಜಿಲ್ಲಾಡಳಿತ ಭವನಕ್ಕೆ ಶಂಕುಸ್ಥಾಪನೆ ಆಗುತ್ತಿದ್ದು, 18 ತಿಂಗಳಲ್ಲಿ ಕೆಲಸ ಪೂರ್ಣಗೊಳ್ಳಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಕಾರ್ಯಕ್ರಮ ಬಹಿಷ್ಕರಿಸಿರುವ ಬಿಜೆಪಿ ಶಾಸಕರ ವಿರುದ್ಧ ಹರಿಹಾಯ್ದರು.

‘ಸಿಎಂ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಅವರು ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸ ಮಾಡಲಿಲ್ಲ. ಸಮಾಜ ಒಡೆಯುವ ಕೆಲಸ ಮಾಡಿದರು. ಅನುಭವ ಮಂಟಪಕ್ಕೆ ಬುನಾದಿ ಹಾಕಿದ್ದು ಸಿದ್ದರಾಮಯ್ಯನವರು. ನಮ್ಮ ಸರ್ಕಾರ ಬಂದ ನಂತರ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷದ ಏಪ್ರಿಲ್ನಲ್ಲಿ ಕಾಮಗಾರಿ ಪೂರ್ಣವಾಗಲಿದೆ’ ಎಂದು ತಿಳಿಸಿದರು.

ಈಶ್ವರ ಖಂಡ್ರೆ, ರಹೀಂ ಖಾನ್ ಕೆಲಸಕ್ಕೆ ಸಿಎಂ ಮೆಚ್ಚುಗೆ

‘ಈಶ್ವರ ಖಂಡ್ರೆ, ರಹೀಂ ಖಾನ್ ಇಬ್ಬರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಖಂಡ್ರೆಯವರು ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತಿದ್ದಾರೆ. ಎಂಎಲ್ಎ ಚುನಾವಣೆಯಲ್ಲಿ 2 ಸ್ಥಾನಗಳಲ್ಲಿ, ಎಂಪಿ ಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆದ್ದಿದ್ದೇವೆ. ರಾಜಶೇಖರ ಪಾಟೀಲ ಅವರು ಸ್ವಲ್ಪದರಲ್ಲಿ ಸೋತಿದ್ದಾರೆ. ಸಾಗರ್ ಖಂಡ್ರೆ ಆಸಕ್ತಿ ನೋಡಿದರೆ ರಾಜಕೀಯವಾಗಿ ಬೆಳೆಯುತ್ತಾರೆ. ಅವರಲ್ಲಿ ಜನನಾಯಕ ಆಗಬೇಕೆಂಬ ಆಸೆ ಇದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

‘2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ’

‘2028ರಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಕಳೆದ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಸೋತಿರುವ ನಾಲ್ಕು ಸ್ಥಾನಗಳಲ್ಲಿ ಜನ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮನವಿ ಮಾಡಿದರು.

ಕಳೆದ ಚುನಾವಣೆಯಲ್ಲಿ 5ರಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ, ಎರಡರಲ್ಲಿ ಗೆದ್ದಿದ್ದೇವೆ. ಗೆದ್ದಿರುವ ಈಶ್ವರ ಬಿ. ಖಂಡ್ರೆ, ರಹೀಂ ಖಾನ್ ಇಬ್ಬರಿಗೂ ಸಚಿವರಾಗಿ ಮಾಡುವಂತೆ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದರು. ಅದರಂತೆಯೇ ಜನ ಕೂಡ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಶಕ್ತಿ ತುಂಬಿದ್ದಾರೆ. ಜಿಲ್ಲೆಯ ಜನತೆಗೆ ಧನ್ಯವಾದ ಹೇಳುವೆ. ಈಗ ಬೀದರ್ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಅದಕ್ಕೆ ಇಂದಿನ ಕಾರ್ಯಕ್ರಮದಲ್ಲಿ ಮುನ್ನುಡಿ ಹಾಡಿದ್ದೇವೆ ಎಂದು ಹೇಳಿದರು.

‘ಬಿಎಸ್ಎಸ್ಕೆ ಪುನಶ್ಚೇತನ, ಕಾರಂಜಾ ಸಂತ್ರಸ್ತರಿಗೆ ಪ್ಯಾಕೇಜ್’

‘ಬಿಎಸ್ಎಸ್ಕೆ ಕಾರ್ಖಾನೆಯ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಅದರ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು. ಕಾರಂಜಾ ಜಲಾಶಯ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಜಿಲ್ಲೆಯಲ್ಲಿ ಶೇ 10ರಷ್ಟು ನೀರಾವರಿ ಪ್ರದೇಶವಿದ್ದು, ₹2 ಸಾವಿರ ಕೋಟಿ ಅನುದಾನ ಕೊಟ್ಟು ಅದನ್ನು ಹೆಚ್ಚಿಸಬೇಕು. ಬೀದರ್ ವಿಶ್ವವಿದ್ಯಾಲಯದಲ್ಲಿ ಮೂಲಸೌಕರ್ಯಕ್ಕೆ ಕೆಕೆಆರ್ಡಿಬಿ ಹಾಗೂ ಸರ್ಕಾರದಿಂದ ಅನುದಾನ ಕೊಡಬೇಕು. ಖಾಲಿಯಿರುವ ಹುದ್ದೆಗಳನ್ನು ತುಂಬಬೇಕು’ ಎಂದು ಸಚಿವ ಈಶ್ವರ ಬಿ. ಖಂಡ್ರೆ ಅವರು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.