ಬೆಂಗಳೂರು: ‘ಅಪರಾಧ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ ಪೊಲೀಸ್ ವಶದಲ್ಲಿರುವ ಆರೋಪಿ ಮೇಲೆ ದೌರ್ಜನ್ಯ ನಡೆದರೆ, ತಕ್ಷಣವೇ ಸ್ಥಳೀಯ ಠಾಣಾಧಿಕಾರಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸಬೇಕು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.

ಆರೋಪಿಗಳ ಮೇಲೆ ನಡೆಯುವ ದೌರ್ಜನ್ಯ, ‘ಕಸ್ಟೊಡಿಯಲ್ ಡೆತ್’ ಪ್ರಕರಣಗಳಿಗೆ ಕಡಿವಾಣ ಹಾಕಲು ಕಠಿಣ ನಿಯಮ ಜಾರಿಗೊಳಿಸಲಾಗಿದೆ.

ಪ್ರಕರಣದ ತನಿಖಾ ಅವಧಿಯಲ್ಲಿ ಸ್ಥಳೀಯ ಪೊಲೀಸರಿಂದ ನಡೆಯಬಹುದಾದ ತನಿಖಾ ವೈಫಲ್ಯ ಹಾಗೂ ಸಾಕ್ಷ್ಯನಾಶದ ಯತ್ನಗಳನ್ನು ತಡೆಯುವ ಉದ್ದೇಶದಿಂದ ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ.

ದೌರ್ಜನ್ಯ ಹಾಗೂ ‘ಕಸ್ಟೊಡಿಯಲ್ ಡೆತ್’ ಪ್ರಕರಣಗಳು ನಡೆದರೆ ಠಾಣೆಯಲ್ಲಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಯನ್ನು ಠಾಣಾಧಿಕಾರಿ ಸಂಗ್ರಹಿಸಬೇಕು. ಅಲ್ಲದೇ ಪ್ರಕರಣದ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ತಕ್ಷಣವೇ ಸಲ್ಲಿಸಬೇಕು’ ಎಂದೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

‘ಕಸ್ಟೊಡಿಯಲ್ ಡೆತ್’ ಪ್ರಕರಣಗಳಲ್ಲಿ ಸ್ಥಳೀಯ ತನಿಖಾ ಅಧಿಕಾರಿಗಳು ತನಿಖೆಯ ವೇಳೆ ಲೋಪ ಎಸಗುತ್ತಿದ್ದಾರೆ. ಎಫ್ಐಆರ್ ದಾಖಲು, ಸ್ಥಳ ಮಹಜರು ಸೇರಿದಂತೆ ಪ್ರಮುಖ ಸಾಕ್ಷ್ಯಾಧಾರಗಳ ಕಲೆ ಹಾಕುವಲ್ಲಿಯೂ ತನಿಖಾಧಿಕಾರಿ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಇದರಿಂದ ಸಿಐಡಿ ತನಿಖೆಗೂ ಅಡ್ಡಿ ಆಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಹೊಸ ಆದೇಶ ಹೊರಡಿಸಲಾಗಿದೆ’ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ(ಬಿಎನ್ಎಸ್ಎಸ್) ಅಡಿಯಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

ಮಾರ್ಗಸೂಚಿ:

* ಸಂತ್ರಸ್ತರ ಹೇಳಿಕೆಗಳು ಮತ್ತು ಶವಪರೀಕ್ಷೆಯ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಆಡಿಯೊ ಹಾಗೂ ವಿಡಿಯೊ ರೆಕಾರ್ಡ್ ಮಾಡಿಕೊಳ್ಳಬೇಕು

* ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆಯಾದ ಬಳಿಕ ತನಿಖಾಧಿಕಾರಿಗಳು ಹಳೆಯ ಡೈರಿಗಳನ್ನು ಪರಿಶೀಲಿಸಬೇಕು. ಖುದ್ದಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆಯನ್ನು ಸರಿಯಾಗಿ ನಡೆಸಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು

* ಆರೋಪಿತ ಅಧಿಕಾರಿ ಹಾಗೂ ಸಿಬ್ಬಂದಿಯ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸುವ ಮುನ್ನ ಸೂಕ್ತ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ಗೆ ಅನುಮತಿ ಪಡೆಯಬೇಕು

* ಹಿಂಸಾಚಾರ ಹಾಗೂ ‘ಕಸ್ಟೊಡಿಯಲ್ ಡೆತ್’ ಪ್ರಕರಣಗಳ ತನಿಖೆಯ ವೇಳೆ ಸ್ಥಳೀಯ ಪೊಲೀಸರು ಯಾವುದೇ ರೀತಿಯ ಪ್ರಭಾವ ಬೀರದಂತೆ ಮತ್ತು ಸಾಕ್ಷ್ಯಗಳನ್ನು ನಾಶಪಡಿಸದಂತೆ ತಡೆಯಲು ಇಡೀ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು

ಪ್ರಕರಣಗಳ ತನಿಖೆ ವೇಳೆ ಯಾವುದೇ ಹಂತದಲ್ಲಿ ನಿಯಮ ಉಲ್ಲಂಘನೆ ಆದರೆ ಸಂಬಂಧಪಟ್ಟ ಅಧಿಕಾರಿಯನ್ನೇ ನೇರ ಹೊಣೆ ಮಾಡಲಾಗುವುದು
–ಎಂ.ಎ. ಸಲೀಂ ರಾಜ್ಯ ಪೊಲೀಸ್ ಮಹಾನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.