ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಡಿಯೂರಪ್ಪ, ಶೆಟ್ಟರ್‌ಗೆ ಬಂದಂತಹ ಪರಿಸ್ಥಿತಿಯೇ ಬೊಮ್ಮಾಯಿಗೂ ಬರಲಿದೆ: ಎಂ. ಬಿ ಪಾಟೀಲ

Published : 17 ಜುಲೈ 2023, 8:12 IST
Last Updated : 17 ಜುಲೈ 2023, 8:12 IST
ಫಾಲೋ ಮಾಡಿ
Comments

ಬೆಂಗಳೂರು: ವಿಧಾನಸಭೆ ಫಲಿತಾಂಶ ಹೊರಬಿದ್ದು ಎರಡು ತಿಂಗಳು ಕಳೆದು, ಹೊಸ ಸರ್ಕಾರದ ಬಜೆಟ್‌ ಮಂಡನೆ ಮುಗಿದರೂ ಕೂಡ ಇನ್ನೂ ವಿರೋಧ ಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿ ಉಳಿದಿದೆ ಎಂದು ಸಚಿವ ಎಂ.ಬಿ. ಪಾಟೀಲ ಟೀಕಿಸಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ ಕುರಿತು ಟ್ವೀಟ್‌ ಮಾಡಿರುವ ಅವರು, ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಬಿಜೆಪಿ ಕರ್ನಾಟಕವು ಅಂತಿಮವಾಗಿ ಬಸವರಾಜ ಬೊಮ್ಮಾಯಿ ಅವರನ್ನು ಮೂಲೆಗುಂಪು ಮಾಡಲು ನಿರ್ಧರಿಸಿದಂತಿದೆ ಎಂದು ಕುಟುಕಿದ್ದಾರೆ.

ಬಿ.ಎಸ್‌. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್‌ ಅವರಿಗೆ ಬಂದಂತಹ ಪರಿಸ್ಥಿತಿಯೇ ಬಸವರಾಜ ಬೊಮ್ಮಾಯಿ ಅವರಿಗೂ ಬರಲಿದೆ. ಬಿಜೆಪಿ ಎಂಬುದು ಕುಸಿಯುತ್ತಿರುವ ಕಾರ್ಡ್‌ಗಳ ಮನೆಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ ಸೇರುವ ಬಗ್ಗೆ ಯೋಚಿಸಬೇಕು. ಅವರು ಈ ಹಿಂದಿನಂತೆ ಜಾತ್ಯತೀತ ಸಿದ್ಧಾಂತಕ್ಕೆ ಮರಳಿದರೆ ಕಾಂಗ್ರೆಸ್‌ ಹೈಕಮಾಂಡ್‌ ಅವರನ್ನು ಪರಿಗಣಿಸಬಹುದು ಎಂದು ಪಾಟೀಲ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT