ಔರಾದ್: ‘ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿ ಇನ್ನೆರಡು ವರ್ಷ ಮಾತ್ರ. ಮುಂದೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ರಚನೆಯಾಗಲಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿಯ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ಬಿಜೆಪಿ ಪ್ರಶಿಕ್ಷಣ-ಮಹಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

‘ಬರಲಿರುವ ವರ್ಷಗಳಲ್ಲಿ ಸಾಲುಸಾಲು ಚುನಾವಣೆ ಎದುರಿಸಬೇಕಾಗುತ್ತದೆ. ಜಿ.ಪಂ., ತಾ.ಪಂ., ಗ್ರಾ.ಪಂ. ಹಾಗೂ ವಿಧಾನಸಭೆ ಚುನಾವಣೆ ನಡೆಯಲಿವೆ. ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಎದುರಿಸಬೇಕಾಗಿದೆ. ಈಗ ವಿಧಾನಸಭೆ ಚುನಾವಣೆ ನಡೆದರೂ ಎನ್ಡಿಎಗೆ 170 ಸ್ಥಾನಗಳು ಖಚಿತ. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ದೇಶದ ಪ್ರಧಾನಿಯಾಗುವ ಅವಕಾಶವಿದೆ. ಆದರೆ, ಕಾಂಗ್ರೆಸ್ನಲ್ಲಿ ಇನ್ನೂ ಕುಟುಂಬ ರಾಜಕಾರಣ ಮುಂದುವರಿದಿದೆ’ ಎಂದು ಟೀಕಿಸಿದರು.

‘ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು ಬೆಲೆ ಏರಿಕೆ ಮಾಡಿರುವುದರಿಂದ ಜನ ಸಂಕಷ್ಟ ಎದುರಿಸುತ್ತಿದ್ದಾರೆ. ಮಹಿಳೆಯರಿಗೆ ₹2,000 ಗೃಹಲಕ್ಷ್ಮಿ ಹಣ ಕೊಟ್ಟು ಪುರುಷರಿಂದ ₹6,000 ಕಸಿದುಕೊಳ್ಳಲಾಗುತ್ತಿದೆ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದಿಂದ ಸಾಮಾನ್ಯ ಜನರ ಮೇಲೆ ಹೆಚ್ಚುವರಿ ಭಾರ ಬಿದ್ದಿದೆ. ಸರ್ಕಾರದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ನೌಕರರಿಗೆ ಸಂಬಳ ಕೊಡಲು ಹಣದ ಕೊರತೆಯಾಗಿದೆ. ಆಸ್ಪತ್ರೆಗಳಲ್ಲಿ ಔಷಧ ಇಲ್ಲದೆ ರೋಗಿಗಳು ಪರದಾಡಬೇಕಾಗಿದೆ. ಹಾಳಾದ ರಸ್ತೆಗಳನ್ನು ಸರಿಪಡಿಸಲು ಸಾಧ್ಯವಾಗುತ್ತಿಲ್ಲ. ಎಸ್ಸಿ, ಎಸ್ಟಿ ಅನುದಾನ ದುರುಪಯೋಗಪಡಿಸಿ ಹೈಕಮಾಂಡ್ಗೆ ಕಪ್ಪ ನೀಡಲಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ರಾಜ್ಯ ಸರ್ಕಾರ ಸಾಲದ ಮೇಲೆ ನಿಂತಿದ್ದು, ಈಗಾಗಲೇ ₹4.5 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದೆ. ಇಷ್ಟೊಂದು ಸಾಲವನ್ನು ಹಿಂದಿನ ಯಾವ ಮುಖ್ಯಮಂತ್ರಿಯೂ ಮಾಡಿಲ್ಲ. ದೇಶದಲ್ಲಿ ಈಗ ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಇದೆ. ಮುಂದೆ ಕರ್ನಾಟಕ ಹಾಗೂ ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವುದು ಖಚಿತ’ ಎಂದು ಹೇಳಿದರು.

ಶಾಸಕ ಪ್ರಭು ಚವಾಣ್ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಮ್ಮ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ. ಶಾಶ್ವತ ಕುಡಿಯುವ ನೀರು ಸೇರಿದಂತೆ ಅನೇಕ ಯೋಜನೆಗಳು ನನೆಗುದಿಗೆ ಬಿದ್ದಿವೆ. ಇಂತಹ ಸರ್ಕಾರ ತೊಲಗಿಸಲು ಪಕ್ಷದ ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ‘ಬಿಜೆಪಿ ಪಕ್ಷದ ಕಾರ್ಯಕರ್ತರು ಒಂದು ಕುಟುಂಬದಂತೆ. ಪಕ್ಷಕ್ಕೆ ಕಾರ್ಯಕರ್ತೆರೇ ಶಕ್ತಿ’ ಎಂದರು.

ಶಾಸಕ ಶರಣು ಸಲಗರ, ಡಾ.ಸಿದ್ದಲಿಂಗಪ್ಪ ಪಾಟೀಲ, ಡಾ.ಶೈಲೇಂದ್ರ ಬೆಲ್ದಾಳೆ, ಮಾರುತಿರಾವ ಮುಳೆ, ರಾಮಶೆಟ್ಟಿ ಪನ್ನಾಳೆ, ವಸಂತ ವಕೀಲ, ಬಸವರಾಜ ಹಳ್ಳೆ, ಬಾಬುರಾವ ಮದಕಟ್ಟಿ, ಕಿರಣ ಪಾಟೀಲ, ಶಿವರಾಜ ಅಲ್ಮಾಜೆ, ಧೊಂಡಿಬಾ ನರೋಟೆ, ಅರಹಂತ ಸಾವಳೆ, ಶಿವರಾಜ ಗಂದಗೆ, ಶರಣಪ್ಪ ತಳವಾಡೆ, ಸಂದೀಪ ಪಾಟೀಲ, ಖಂಡೋಬಾ ಕಂಗಟೆ, ವೀರಣ್ಣ ಕಾರ ಬಾರಿ, ಮಹೇಶ್ವರ ಸ್ವಾಮಿ, ಪಕ್ಷದ ಸಹ ಪ್ರಭಾರಿ ಶರಣಪ್ಪ, ಗುರುನಾಥ ಜಾಂತಿ ಕರ್, ಗಿರೀಶ ವಡೆಯರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.