ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ: ಬಾಲಕಿ ಹೇಳಿಕೆ ದಾಖಲು

Published 1 ಏಪ್ರಿಲ್ 2024, 15:38 IST
Last Updated 1 ಏಪ್ರಿಲ್ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಸಂತ್ರಸ್ತ ಬಾಲಕಿಯಿಂದ ಸಿಆರ್‌ಪಿಸಿ 164 ಅಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಹದಿನೇಳು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಮಾರ್ಚ್ 14ರಂದು ಎಫ್‌ಐಆರ್‌ ದಾಖಲಾಗಿತ್ತು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ದಾಖಲಾದ ಪ್ರಕರಣ ಇದಾಗಿದ್ದರಿಂದ, ನ್ಯಾಯಾಧೀಶರ ಎದುರು ಬಾಲಕಿಯಿಂದ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಸಲಾಗಿದೆ.

‘ರಾಜ್ಯ ಸರ್ಕಾರ ಆದೇಶ ಹೊರಡಿಸುತ್ತಿದ್ದಂತೆ, ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಸಂತ್ರಸ್ತ ಬಾಲಕಿಯಿಂದ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ಬಾಲಕಿಯ ತಾಯಿಯಿಂದಲೂ ಮಾಹಿತಿ ಪಡೆಯಲಾಗಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ಕಾನೂನು ತಜ್ಞರ ಸಲಹೆ: ‘ಇದೊಂದು ಬಾಲಕಿಗೆ ಸಂಬಂಧಪಟ್ಟ ಸೂಕ್ಷ್ಮ ಪ್ರಕರಣ. ಹೀಗಾಗಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ತನಿಖೆ ಮುಂದುವರಿಸಲಾಗುತ್ತಿದೆ. ಎಲ್ಲ ಬಗೆಯ ಪುರಾವೆಗಳನ್ನು ಸಂಗ್ರಹಿಸುವ ಕೆಲಸವೂ ನಡೆದಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT