ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ಗಣತಿ ವರದಿ ಸ್ವೀಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Published 7 ಜೂನ್ 2023, 4:13 IST
Last Updated 7 ಜೂನ್ 2023, 4:13 IST
ಅಕ್ಷರ ಗಾತ್ರ

ಬೆಂಗಳೂರು: ‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ವರದಿಯನ್ನು ಸರ್ಕಾರ ಸ್ವೀಕರಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಗಳ ಮಠಾಧೀಶರ ಒಕ್ಕೂಟದ ನಿಯೋಗದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

‘ನಮ್ಮ ಸರ್ಕಾರ ಇದ್ದಾಗ ನಡೆಸಿದ್ದ ಸಮೀಕ್ಷಾ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದ್ದವು. ವರದಿ ಸ್ವೀಕರಿಸುವುದರ ಜತೆಗೆ, ವಸ್ತುಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಿದೆ’ ಎಂದು ಭರವಸೆ ನೀಡಿದರು.

‘ಐತಿಹಾಸಿಕ ಕಾರಣಗಳಿಂದಾಗಿ ಶತಶತಮಾನಗಳಿಂದ ಅವಕಾಶ ವಂಚಿತರಿಗೆ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆ ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ₹162 ಕೋಟಿ ವೆಚ್ಚ ಮಾಡಿ ನಡೆಸಿತ್ತು’ ಎಂದರು.

ಇದನ್ನೂ ಓದಿ... ಜಾತಿ ಗಣತಿ ವರದಿ ಸ್ವೀಕಾರಕ್ಕೆ ನಿರ್ಧಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT