ಮಂಡ್ಯ: ‘ಬಿಹಾರ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ರಚನೆ ಆಗಬಹುದೇನೋ. ಆದರೆ, ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷಕ್ಕೆ ಬಿಟ್ಟಿದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘34 ಮಂದಿ ಸಚಿವರಾಗಿದ್ದಾರೆ. ಉಳಿದ ಆಕಾಂಕ್ಷಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಮುಖ್ಯಮಂತ್ರಿ ಅವರು ಕರೆದಿರುವ ಡಿನ್ನರ್ ಮೀಟಿಂಗ್ಗೂ ರಾಜಕೀಯಕ್ಕೂ ಸಂಬಂಧವಿಲ್ಲ, ವಿರೋಧ ಮಾಡುವವರು ಸಲ್ಲದ ಮಾತು ಹೇಳುತ್ತಿದ್ದಾರೆ ಅಷ್ಟೆ’ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್ ನಾಯಕರೇ ಹೇಳಿದಂತೆ ನವೆಂಬರ್ಗೆ ಕ್ರಾಂತಿ ಆಗುವುದೋ ಜನವರಿಯಲ್ಲಿ ಸಂಕ್ರಾಂತಿ ಆಗುವುದೋ ಗೊತ್ತಿಲ್ಲ. ಮುಖ್ಯಮಂತ್ರಿ ಕುರ್ಚಿ ಖಾಲಿಯಾಗುವುದು ನಿಶ್ಚಿತ
ಬಿ.ಶ್ರೀರಾಮುಲು ಬಿಜೆಪಿ ನಾಯಕ ಮಾಜಿ ಸಚಿವ

ಸಿ.ಎಂ ಯಾಕಾಗಬಾರದು –ಪರಮೇಶ್ವರ್

ಹುಬ್ಬಳ್ಳಿ: ‘ಮುಖ್ಯಮಂತ್ರಿ ಆಗುವ ಅಸೆ ಇದೆಯೇ’ ಎಂಬ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು ‘ಯಾಕಾಗಬಾರದು? ಎಂದು ಪ್ರಶ್ನಿಸಿದ್ದಾರೆ. ಇಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ‘ಎಲ್ಲ ಶಾಸಕರಿಗೆ ಸಚಿವರಾಗುವ ಆಸೆ ಇರುತ್ತದೆ. ಸಂಪುಟ ಪುನರ್ ರಚನೆ 3 ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿ ವಿಷಯಗಳ ಬಗ್ಗೆ ಮುಖ್ಯಮಂತ್ರಿ ವರಿಷ್ಠರು ನಿರ್ಧರಿಸುವರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.