ಬೆಂಗಳೂರು: ಸಂವಿಧಾನದ 371ನೇ (ಜೆ) ಕಲಂನ ಮೀಸಲಾತಿಯಡಿ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನೂ ಭರ್ತಿ ಮಾಡುತ್ತೇವೆ ಎಂದಿದ್ದ ಬಿಜೆಪಿ ಮಾತು ಮರೆತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ನೇಮಕಾತಿ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸರ್ಕಾರಿ ಹುದ್ದೆಗಳನ್ನು ಮಾರಾಟ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ (ಬಿಜೆಪಿಗ) ತಮ್ಮ ಮಾತು ನೆನಪಾಗುವುದಾದರೂ ಹೇಗೆ. ಭರ್ತಿಯಾಗುತ್ತಿರುವುದು ಹುದ್ದೆಗಳಲ್ಲ ಬಿಜೆಪಿಗರ ಜೇಬು ಮಾತ್ರ’ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ವಿರುದ್ಧ ಸಿಎಂ ಗುಡುಗು: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿಂದಿನ ಸರ್ಕಾರ ಮಂಡಳಿಗೆ ಹಣ ಘೋಷಣೆ ಮಾಡಿತ್ತು. ಆದರೆ ಬಿಡುಗಡೆ ಮಾಡಿರಲಿಲ್ಲ. ನಮ್ಮದು ನುಡಿದಂತೆ ನಡೆಯುವ ಸರ್ಕಾರವಾಗಿದ್ದು, ಘೋಷಿತ ಅನುದಾನ ಬಿಡುಗಡೆ ಮಾಡಿದ್ದೇವೆ ಎಂದರು.

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಮುಂಬರುವ ವರ್ಷವೂ ₹ 3 ಸಾವಿರ ಕೋಟಿ ಹಂಚಿಕೆ ಮಾಡಲಾಗುವುದು. ಕಲಬುರಗಿಯಲ್ಲಿ ಜವಳಿ ಪಾರ್ಕ್ಗೆ ಶೀಘ್ರ ಅಡಿಗಲ್ಲು ಹಾಕಲಾಗುವುದು ಎಂದು ಬೊಮ್ಮಾಯಿ ಘೋಷಿಸಿದರು.

ಕಲಬುರಗಿ, ವಿಜಯಪುರದಲ್ಲಿ ಜವಳಿ ಪಾರ್ಕ್ ಆರಂಭಿಸಲುಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ. ಎರಡೂ ಕಡೆ ಪಾರ್ಕ್ ಆರಂಭಕ್ಕೆ ಮಂಜೂರಾತಿ ನೀಡಲಿದ್ದು, ಶೀಘ್ರ ಕಲಬುರಗಿಗೆ ಮತ್ತೆ ಬಂದು ಅಡಿಗಲ್ಲು ಹಾಕಲಿದ್ದೇನೆ ಎಂದು ಭರವಸೆ ವ್ಯಕ್ತಪಡಿಸಿದರು.

ಇವನ್ನೂ ಓದಿ...

ಕೆಕೆಆರ್ಡಿಬಿಗೆ ₹3 ಸಾವಿರ ಕೋಟಿ, ಕಲಬುರಗಿಯಲ್ಲಿ ಜವಳಿ ಪಾರ್ಕ್:ಸಿಎಂ ಬೊಮ್ಮಾಯಿ

Video: ಕಲಬುರಗಿಯಲ್ಲಿ ಸಿಎಂಬಸವರಾಜ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನ

ಕಲಬುರಗಿ: ಸಿಎಂಕಾರಿನೊಳಗೆ ಮನವಿ ಪತ್ರ ಎಸೆದಕೋಲಿ ಸಮುದಾಯದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.